ಬೆಂಗಳೂರು | ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ₹55 ಕೋಟಿ ಅವ್ಯವಹಾರ: ಲೋಕಾಯುಕ್ತ ದಾಳಿ

Date:

Advertisements
  • ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ ₹55 ಕೋಟಿ ಬಿಲ್ ಪಾವತಿಸಿರುವ ಆರೋಪ
  • ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು

ನಕಲಿ ದಾಖಲೆ ಸೃಷ್ಟಿಸಿ ₹55 ಕೋಟಿ ಅವ್ಯವಹಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದೇವರಾಜ ಅರಸು ಟ್ರಕ್ ಟರ್ಮಿನಲ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ.

ದೇವರಾಜ ಅರಸು ಟ್ರಕ್ ಟರ್ಮಿನಲ್‌ನ ಅಧ್ಯಕ್ಷ ಡಿಎಸ್‌ ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅವರು ಕಾಮಗಾರಿಯೊಂದಕ್ಕೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಪ್ರಯತ್ನಿಸಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.

ಕಾಮಗಾರಿಯೊಂದಕ್ಕೆ ಮಂಜೂರಾಗಿದ್ದ ₹55 ಕೋಟಿಯನ್ನು ಸಂಸ್ಥೆಯ ಅಧ್ಯಕ್ಷ ಡಿಎಸ್ ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.

Advertisements

ಈ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹50.70 ಕೋಟಿ ವೆಚ್ಚದಲ್ಲಿ ಆರು ಜಂಕ್ಷನ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿದ ಸರ್ಕಾರ

ಮೂಲಗಳ ಪ್ರಕಾರ ಕಾಮಗಾರಿಯನ್ನೇ ನಡೆಸದೆ ಬರೋಬ್ಬರಿ ₹55 ಕೋಟಿ ಬಿಲ್ ಪಾವತಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ, ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ತೀವ್ರ ಶೋಧ ನಡೆಸುತ್ತಿದ್ದಾರೆ. ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X