ರಸ್ತೆ ದಾಟುತ್ತಿದ್ದ ಬಾಲಕನೊಬ್ಬನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿ ಸೆ.17ರ ರಾತ್ರಿ 11.30ಕ್ಕೆ ಈ ಘಟನೆ ನಡೆದಿದೆ. ಸಾವನ್ನಪ್ಪಿದ ಬಾಲಕ ತನ್ನ ಸ್ನೇಹಿತರೊಂದಿಗೆ ರಸ್ತೆ ದಾಟುತಿದ್ದನು. ಈ ವೇಳೆ, ಎದುರುಗಡೆಯಿಂದ ವೇಗವಾಗಿ ಬಂದ ಕಾರ್‌ವೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಬಹು ಎತ್ತರಕ್ಕೆ ಹಾರಿಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಾಲಕನಿಗೆ ಡಿಕ್ಕಿ ಹೊಡೆದು ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ವಿಸರ್ಜನೆ ಮೆರವಣಿಗೆ; ಅ.1 ರವರೆಗೆ ಮದ್ಯ ಮಾರಾಟ ನಿಷೇಧ
ಈ ಕುರಿತು ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.