ಬೆಂಗಳೂರು | ಮಾಲೀಕರ ಮನೆಗೆ ಕನ್ನ ಹಾಕಿದ ಲಿವಿಂಗ್ ಟುಗೆದರ್ ಜೋಡಿ

Date:

Advertisements
  • ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಜೋಡಿ

ರಾಜಧಾನಿ ಬೆಂಗಳೂರಿನ ಎಜಿಎಸ್ ಲೇಔಟ್​​​ನಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಈ ಜೋಡಿ ಮನೆಯ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳಾದ ಲಿಖಿತ ಹಾಗೂ ಸುಮಂತ ಎಂಬುವವರನ್ನು ಬಂಧಿಸಿದ್ದಾರೆ.

ಏನಿದು ಘಟನೆ?

Advertisements

ಬೆಂಗಳೂರಿನ ಎಜಿಎಸ್‌ ಲೇಔಟ್‌ನ ಪ್ರೇಮಲತ ಎಂಬುವವರ ಮನೆಯಲ್ಲಿ ಲಿಖಿತ ಹಾಗೂ ಸಮಂತ ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆಯ ಮನೆಯಲ್ಲಿದ್ದರು. ಈ ಇಬ್ಬರು ನಾಲ್ಕು ತಿಂಗಳು ಮನೆ ಮಾಲೀಕರ ಚಲನ-ವಲನ ಗಮನಿಸಿದ್ದರು.

ಸಹಜೀವನ ನಡೆಸುತ್ತಿದ್ದ ಈ ಜೋಡಿ ಇತ್ತೀಚೆಗೆ ಮನೆ ಖಾಲಿ ಮಾಡಿತ್ತು. ಇವರು ಮನೆ ಖಾಲಿ ಮಾಡಿದ ಕೆಲವೇ ದಿನಗಳಲ್ಲಿ ಮಾಲೀಕರ ಮನೆಯಲ್ಲಿ ಕಳ್ಳತನವಾಗಿದೆ. ಬಂಧಿತ ಆರೋಪಿಗಳು 4 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕದ್ದ ಚಿನ್ನವನ್ನು ಮಾರಿ ಬಂದ ಹಣದಲ್ಲಿ ಶಿವಮೊಗ್ಗದಲ್ಲಿ ನೆಲೆಸಿದ್ದರು. ಈ ದುಡ್ಡು ಖಾಲಿ ಆದ ನಂತರ ಆರೋಪಿಗಳು ಮತ್ತೊಂದು ಕೃತ್ಯವೆಸಗಲು ಹೊಂಚು ಹಾಕಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಇಬ್ಬರು ಆರೋಪಿಗಳು ಕಳ್ಳತನ ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸುಬ್ರಮಣ್ಯಪುರ ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X