- ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ
- ತಿಲಕ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಅನಾರೋಗ್ಯಕ್ಕೆ ಬೇಸತ್ತು, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ.ಎಸ್ ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ತಿಲಕ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರೇಣುಕಾನಂದ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಆಸ್ಪತ್ರೆಯ ಡ್ಯೂಟಿ ರೂಮ್ನಲ್ಲೇ ಏಪ್ರಿಲ್ 23ರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೀರೆಯಿಂದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತದಾನ ಅತ್ಯಮೂಲ್ಯ; ತಪ್ಪದೆ ಮತದಾನ ಮಾಡಲು ಬಿಬಿಎಂಪಿ ವಿಶೇಷ ಆಯುಕ್ತ ಮನವಿ
ಆಸ್ಪತ್ರೆಯ ಸಿಬ್ಬಂದಿ ಈ ಬಗ್ಗೆ ತಿಲಕ್ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.