ಬೆಂಗಳೂರು | 24/7 ಹೋಟೆಲ್​ ತೆರೆಯಲು ಅನುಮತಿ ನೀಡಿ: ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಿಬಿಎಚ್‌ಎ

Date:

Advertisements
  • ಉದ್ಯಮಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ದಾರಿ
  • ಕಳೆದ 1 ವರ್ಷದಿಂದ 24/7 ಹೋಟೆಲ್‌ ತೆರೆಯಲು ಮನವಿ

ರಾಜಧಾನಿ ಬೆಂಗಳೂರಿನಲ್ಲಿ ಗ್ರಾಹಕರಿಗೆ ಹೆಚ್ಚಿನ ಸೇವೆ ಒದಗಿಸುವ ನಿಟ್ಟಿನಲ್ಲಿ 24/7 ಹೋಟೆಲ್‌ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘ (ಬಿಬಿಎಚ್‌ಎ) ಸರ್ಕಾರಕ್ಕೆ ಮನವಿ ಮಾಡಿದೆ.

ಕಳೆದ ಒಂದು ವರ್ಷದಿಂದ ಬಿಬಿಎಚ್‌ಎ 24/7 ಹೋಟೆಲ್‌ಗಳನ್ನು ತೆರೆಯಲು ಮನವಿ ಮಾಡುತ್ತಿದ್ದು, ಈ ಬಾರಿ ನೂತನ ಸರ್ಕಾರಕ್ಕೆ ಹಾಗೂ ಬೆಂಗಳೂರು ಪೊಲೀಸರಿಗೆ ಮನವಿ ಸಲ್ಲಿಸಿದೆ.

“ತಡರಾತ್ರಿ 1ರವರೆಗೆ ಎಲ್ಲ ಹೋಟೆಲ್‌, ಬೇಕರಿ, ಸ್ವೀಟ್‌ ಸ್ಟಾಲ್‌ ಹಾಗೂ ಐಸ್‌ಕ್ರೀಂ ಪಾರ್ಲರ್‌ಗಳನ್ನು ತೆರೆದಿಡಬಹುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವೂ 24/7 ಹೋಟೆಲ್‌ಗಳನ್ನು ತೆರೆದಿಡಲು ಮಾರ್ಗಸೂಚಿ ನೀಡಿದ್ದರೂ ಪೊಲೀಸ್‌ ಇಲಾಖೆ ಅನುಮತಿ ನೀಡಿಲ್ಲ” ಎಂದು ಬಿಬಿಎಚ್‌ಎ ಅಧ್ಯಕ್ಷ ಪಿ ಸಿ ರಾವ್‌ ಹೇಳಿದ್ದಾರೆ.

Advertisements

“ದೇಶದ ಇತರೆ ರಾಜ್ಯಗಳಾದ ತಮಿಳುನಾಡು, ಕೇರಳ, ಗುಜರಾತ್ ಮುಂತಾದ ಕಡೆಗಳಲ್ಲಿ ಈಗಾಗಲೇ 24/7 ಹೋಟೆಲ್ ತೆರೆದಿರಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡು ಮಾರ್ಗಸೂಚಿ ಹೊರಡಿಸಿವೆ. ಕೇರಳ ಮತ್ತು ತಮಿಳುನಾಡು ಉಚ್ಚನ್ಯಾಯಾಲಯಗಳು ಇದರ ಪರವಾಗಿ ತೀರ್ಪು ನೀಡಿವೆ. ಇದರಿಂದ ಬಹಳಷ್ಟು ಜನರಿಗೆ ಉಪಯೋಗವಾಗಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಲಸೋರ್ ರೈಲು ಅವಘಡ | ಗಾಯಾಳು ಕನ್ನಡಿಗರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

“ಹೋಟೆಲ್ 24/7 ತೆರೆದಿರುವುದರಿಂದ ಹಾಲು ಮತ್ತು ದಿನಪತ್ರಿಕೆ ಸರಬರಾಜು ಮಾಡುವವರು, ತರಕಾರಿ, ಹೂವು, ಹಣ್ಣು ಮುಂತಾದವುಗಳನ್ನು ಮಾರ್ಕೆಟ್‌ಗೆ ತರುವ ರೈತರು ಹಾಗೂ ವ್ಯಾಪಾರಿಗಳು, ಶಿಫ್ಟ್‌ನಲ್ಲಿ ಕೆಲಸಕ್ಕೆ ಹೋಗುವವರು ಸೇರಿದಂತೆ ಬಹಳಷ್ಟು ಜನಸಾಮಾನ್ಯರು ಇರುತ್ತಾರೆ. ಇವರಿಗೆ ಆಹಾರದ ಅಗತ್ಯತೆ ಇರುತ್ತದೆ. ಇದಲ್ಲದೇ ಬಹಳಷ್ಟು ಪ್ರವಾಸಿಗರು ಬಸ್‌, ರೈಲು ಮತ್ತು ವಿಮಾನ ಮೂಲಕ ರಾತ್ರಿ ನಗರಕ್ಕೆ ಬಂದಿಳಿಯುವವರಿರುತ್ತಾರೆ. ಅಗತ್ಯ ಸೇವೆ ಒದಗಿಸುವ ಪೊಲೀಸ್‌, ಆಂಬ್ಯುಲೆನ್ಸ್‌, ವೈದ್ಯಕೀಯ ಸಿಬ್ಬಂದಿ ಮುಂತಾದವರು ರಾತ್ರಿ ಓಡಾಡುತ್ತಾರೆ. ಇವರಿಗೆಲ್ಲ ಅನುಕೂಲವಾಗಲಿದೆ” ಎಂದು ಹೇಳಿದ್ದಾರೆ.

“ಜನರಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯಗಳನ್ನು ಉಚಿತವಾಗಿ ಪೂರೈಸುವುದರಿಂದ ಸಹಕಾರಿಯಾಗಲಿದೆ. ಇದರಿಂದ ಹೊಸ ಉದ್ಯಮಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿವೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X