ಬೆಂಗಳೂರು | ನಿರೂದ್ಯೋಗವನ್ನು ಬಂಡವಾಳ ಮಾಡಿಕೊಂಡ ಆರೋಪಿಯ ಬಂಧನ

Date:

Advertisements
  • ಕಂಪನಿಯೇ ಪ್ರತಿ ತಿಂಗಳು ಇಎಂಐ ಪಾವತಿಸಿ ಸಾಲ ತೀರಿಸಲಿದೆ ಎಂದಿದ್ದ ಆರೋಪಿ
  • ‘ಗೀಕ್‌ಲರ್ನ್‌ ಎಜುಟೆಕ್‌ ಸವೀರ್‍ಸಸ್‌ ಪ್ರೈವೇಟ್‌ ಲಿಮಿಟೆಡ್‌’ ಎಂಬ ಕಂಪನಿಯಿಂದ ಮೋಸ

ರಾಜಧಾನಿ ಬೆಂಗಳೂರಿನಲ್ಲಿ 1,800 ಜನರಿಗೆ ‘ಡಾಟಾ ಸೈನ್ಸ್‌ ಆಕ್ಟಿಟೆಕ್ಟ್ ಪ್ರೋಗ್ರಾಂ’ ಕೋರ್ಸ್‌ನ ಆನ್‌ಲೈನ್‌ ಉಚಿತ ತರಬೇತಿ ನೀಡುವುದರ ಜತೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳ ಮೇಲೆ ಬರೋಬ್ಬರಿ ₹19 ಕೋಟಿ ಸಾಲ ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕಮಲಾಪುರಂ ಶ್ರೀನಿವಾಸ್ ಕಲ್ಯಾಣ್ ಬಂಧಿತ ವ್ಯಕ್ತಿ. ಮೋಸ ಹೋದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಸತ್ಯೇಂದ್ರ ಮಧುಕರ್ (33) ಸೇರಿದಂತೆ ಇನ್ನೂ ಮೂವರು ಜಯನಗರ ಪೊಲೀಸ್‌ರಿಗೆ ದೂರು ನೀಡಿದ್ದರು. ಇವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣದಲ್ಲಿ ಕೆಲ ಸಿಬ್ಬಂದಿ ಕೂಡ ಆರೋಪಿಗಳಾಗಿದ್ದಾರೆ.

ಪ್ರಕರಣದ ಹಿನ್ನೆಲೆ?

Advertisements

ತಲಘಟ್ಟಪುರ ನಿವಾಸಿ ಕಮಲಾಪುರಂ ಶ್ರೀನಿವಾಸ್‌ ಕಲ್ಯಾಣ್‌ ಎಂಬುವವರು ಮೂಲತಃ ಆಂಧ್ರಪ್ರದೇಶದವರು. ಜಯನಗರದ ವಿಜಯರಂಗಂ ಲೇಔಟ್‌ನಲ್ಲಿ ಇಂಡಿಕ್ಯೂಬ್‌ ಸೌತ್‌ ಸಮಿತ್‌ ಕಟ್ಟಡದಲ್ಲಿ ‘ಗೀಕ್‌ಲರ್ನ್‌ ಎಜುಟೆಕ್‌ ಸವೀರ್‍ಸಸ್‌ ಪ್ರೈವೇಟ್‌ ಲಿಮಿಟೆಡ್‌’ ಎಂಬ ಕಂಪನಿ ತೆರೆದಿದ್ದನು.

ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಇತನೇ ಆಗಿದ್ದನು. ಇತನು ‘ಡಾಟಾ ಸೈನ್ಸ್‌ ಆಕ್ಟಿಟೆಕ್ಟ್ ಪ್ರೋಗ್ರಾಂ’ ಕೋರ್ಸಿಗೆ ಉಚಿತ ಆನ್‌ಲೈನ್‌ ತರಬೇತಿ ನೀಡುವುದರ ಜತೆಗೆ ಕೆಲಸವನ್ನೂ ಕೊಡಿಸುವುದಾಗಿ ಜಾಹೀರಾತು ನೀಡಿದ್ದನು.

ಈ ಸುದ್ದಿ ಓದಿದ್ದೀರಾ? ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಈ ಜಾಹೀರಾತಿಗೆ ಸುಮಾರು 1800ಕ್ಕೂ ಅಧಿಕ ವಿಧ್ಯಾರ್ಥಿಗಳು ಮಾರು ಹೋಗಿ ಈ ಕೋರ್ಸಿಗೆ ಸೇರ್ಪಡೆಯಾಗಿದ್ದರು. ಬಳಿಕ ಇತ ಕೋರ್ಸಿಗೆ ಸೇರ್ಪಡೆಯಾದ ಸುಮಾರು 1,800ಕ್ಕೂ ಅಧಿಕ ವಿದ್ಯಾರ್ಥಿಗಳ ಹೆಸರಿನಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗಳಿಂದ ಕೋಟ್ಯಂತರ ರೂ. ಶೈಕ್ಷಣಿಕ ಸಾಲ ಪಡೆದು ಕೋರ್ಸ್‌ ಮುಗಿಯುವುದರೊಳಗೆ ಕಂಪನಿಯೇ ಪ್ರತಿ ತಿಂಗಳು ಇಎಂಐ ಪಾವತಿಸಿ ಸಾಲ ತೀರಿಸಲಿದೆ ಎಂದು ಹೇಳಿ ಇತ್ತೀಚೆಗೆ ಕಂಪನಿ ಮುಚ್ಚಿಕೊಂಡು ಪರಾರಿಯಾಗಿದ್ದನು.

ಆರೋಪಿಯು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ದಾಖಲೆಗಳನ್ನು ಬಳಸಿಕೊಂಡು ನಾನಾ ಖಾಸಗಿ ಫೈನಾನ್ಸ್‌ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು ಸುಮಾರು ₹19 ಕೋಟಿ ಸಾಲ ಪಡೆದಿದ್ದಾನೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X