ಬೆಂಗಳೂರು | ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ; ಇಬ್ಬರ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸುತ್ತಿರುವಾಗ ಕಾರು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಇದೀಗ, ವೈಟ್​ ಫೀಲ್ಡ್​​ನ ಸಿದ್ದಾಪುರ ಬಳಿ ಕಾರು ಹಿಂಬಾಲಿಸಿ ಅಡ್ಡಗಟ್ಟಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವೈಟ್‌ಫೀಲ್ಡ್‌ ಪೊಲೀಸರು ಬಂಧಿಸಿದ್ದಾರೆ.

ರಘು ಮತ್ತು ಮುರುಳಿ ಬಂಧಿತ ಆರೋಪಿಗಳು. ಮುರಳಿ ಟೆನಿಸ್ ಕೋಚ್ ಆಗಿದ್ದು, ರಘು ಎಲೆಕ್ಟ್ರಿಷಿಯನ್ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಆ. 5 ರಂದು ವೈಟ್​ ಫೀಲ್ಡ್​​ನ ಸಿದ್ದಾಪುರ ಬಳಿ ಕಾರೊಂದು ಸಂಚರಿಸುತ್ತಿದ್ದಾಗ ಏಕಾಏಕಿ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಕಾರಿನಿಂದ ಕೆಳಗೆ ಇಳಿಯಲು ಹೇಳಿದ್ದಾರೆ. ಕಾರು ಚಾಲಕ ಕೆಳಗೆ ಇಳಿಯದಿದ್ದಾಗ ಕಲ್ಲಿನಿಂದ ಕಾರು ಗಾಜು ಒಡೆಯಲು ಹಾಗೂ ವಿಂಡ್‌ಶೀಲ್ಡ್ ಮುರಿಯಲು ಪ್ರಯತ್ನಿಸಿದ್ದಾರೆ.

ಬೈಕ್​​ನಲ್ಲಿ ಕಾರ್‌ ಅನ್ನು ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಮೂರು ಸ್ಥಳಗಳಲ್ಲಿ ಕಾರಿಗೆ ಬೈಕ್ ಅನ್ನು ಅಡ್ಡ ಹಾಕಿದ್ದಾರೆ. ಕಾರಿನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಈ ಸಂಪೂರ್ಣ ಘಟನೆ ಚಿತ್ರೀಕರಣವಾಗಿದೆ.

Advertisements

ಈ ಬಗ್ಗೆ ‘ನಾನು ವಾಚಿಂಗ್’ ಎಂಬುವವರು ಟ್ವೀಟ್ ಮಾಡಿದ್ದು, “ಬೆಂಗಳೂರಿನ ಸಿದ್ದಾಪುರ ವೈಟ್ ಫೀಲ್ಡ್ ಬಳಿ 1 ತಿಂಗಳ ಅಂತರದಲ್ಲಿ ಕಾರಿನ ಕ್ಯಾಮರಾ ಕಣ್ಣಿಗೆ ಮತ್ತೊಂದು ಪ್ರಕರಣ ಸಿಕ್ಕಿದೆ. ಮಾಹಿತಿಯ ಪ್ರಕಾರ ದ್ವಿಚಕ್ರ ವಾಹನ ಸವಾರರು ಕಾರಿನಲ್ಲಿದ್ದ ವ್ಯಕ್ತಿ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲು 3 ಬಾರಿ ಹಿಂಬಾಲಿಸಿದ್ದಾರೆ. ಕಲ್ಲು ತೂರಾಟ ನಡೆಸಿ ಕಿಟಕಿಗಳನ್ನು ಒಡೆಯಲು ಪ್ರಯತ್ನಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X