ಬೆಂಗಳೂರು ಬಂದ್ | 13 ದೇಶೀಯ ವಿಮಾನ ಹಾರಾಟ ರದ್ದು

Date:

Advertisements

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಯುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬಂದ್ ಪರಿಣಾಮ ಬೀರಿದ್ದು, ನಗರಕ್ಕೆ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ.

ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟವನ್ನು ವಿವಿಧ ಏರ್ ಲೈನ್ಸ್ ಕೊನೆ ಕ್ಷಣದಲ್ಲಿ ರದ್ದು ಮಾಡಿವೆ.

ಹೊರ ರಾಜ್ಯಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ವಿಮಾನಗಳು ಬಂದ್​ ಹಿನ್ನೆಲೆಯಲ್ಲಿ ಪ್ರಯಾಣಿಕರಿಲ್ಲದೆ ರದ್ದಾಗಿವೆ. ಈ ವಿಮಾನಗಳು ಸೆ.26 ರಂದು ಬೆಳಿಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಒಟ್ಟು 13 ವಿಮಾನಗಳು ಕೊನೇ ಕ್ಷಣದಲ್ಲಿ ರದ್ದಾಗಿವೆ.

Advertisements

ವಿಮಾನಗಳ ಹಾರಾಟ ರದ್ದಾದ ಕಾರಣ ಟರ್ಮಿನಲ್‌ನಲ್ಲಿ ಪ್ರಯಾಣಿಕರ ಓಡಾಟದ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಕ್ಯಾಬ್ ಚಾಲಕರು ಏರ್‌ಪೋರ್ಟ್‌ ನಲ್ಲಿ ಗಂಟೆಗಟ್ಟಲೇ ಕಾಯುವ ಸಂದರ್ಭ ಎದುರಾಗಿದೆ.

ಪ್ರಯಾಣದ ಸಮಯ ಗಮನಿಸಿ

ಸೆಪ್ಟೆಂಬರ್ 26ರಂದು ನಾನಾ ಒಕ್ಕೂಟಗಳು ಮತ್ತು ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ಒಂದು ದಿನದ ಬೆಂಗಳೂರು ಬಂದ್‌ನಿಂದಾಗಿ, ಸಾರಿಗೆ ಸೇವೆಗಳಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಹಾಗಾಗಿ, ಪ್ರಯಾಣಿಕರು ಪ್ರಯಾಣದ ಸಮಯವನ್ನು ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣಕ್ಕೆ ಬರುವಂತೆ ಸೂಚನೆ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳು, ಸರ್ಕಾರ ಮತ್ತು ಮಾಧ್ಯಮಗಳಿಂದ ಬಿಡುಗಡೆಯಾಗುವ ಸೂಚನೆಗಳನ್ನು ಅನುಸರಿಸುವಂತೆ ಪ್ರಯಾಣಿಕರಿಗೆ ವಿನಂತಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X