ಬೆಂಗಳೂರು ಬಂದ್ | ರಸ್ತೆಗಿಳಿಯದ ಖಾಸಗಿ ವಾಹನ; ಪ್ರಯಾಣಿಕರ ಪರದಾಟ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದ್ದು, ನಗರದೆಲ್ಲೆಡೆ ಕ್ಯಾಬ್‌ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ದಿನನಿತ್ಯ ರಸ್ತೆಗೆ ಇಳಿಯುತ್ತಿದ್ದಂತಹ ಆಟೋ ರಿಕ್ಷಾಗಳ ಸಂಖ್ಯೆ ಎರಡಂಕಿಯಷ್ಟಿದೆ. ಅಲ್ಲೊಂದು ಇಲ್ಲೊಂದು ಎಂಬಂತೆ ಕೆಲವರು ಹೆಚ್ಚಿನ ದರದೊಂದಿಗೆ ಆಟೋ ಸಂಚಾರ ನಡೆಸುತ್ತಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟ ನಡೆಸುತ್ತಿರುವ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಹಲವು ಖಾಸಗಿ ಬಸ್‌, ಆಟೋ, ಓಲಾ, ಉಬರ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಈ ಖಾಸಗಿ ವಾಹನಗಳ ಸಂಚಾರ ಬಂದ್‌ ಆದ ಕಾರಣ ಜನರು ತಮ್ಮ ದಿನನಿತ್ಯದ ಕೆಲಸಗಳಿಗೆ ತೆರಳಲು ಕಷ್ಟಪಡುವಂತಾಗಿದೆ.

ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಖಾಸಗಿ ಆಟೋ, ಟ್ಯಾಕ್ಸಿ ಮತ್ತು ವಾಹನಗಳ ಚಾಲಕರ ಒಕ್ಕೂಟವು ತಮ್ಮ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಬಂದ್‌ಗೆ ಕರೆ ಕೊಟ್ಟಿದೆ.

Advertisements

ಜನರು ಪರ್ಯಾಯ ಮಾರ್ಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ಸಂಚಾರ ನಡೆಸುತ್ತಿದ್ದಾರೆ. ಜನದಟ್ಟಣೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ಬಿಎಂಆರ್‌ಸಿಎಲ್ ತೀರ್ಮಾನಿಸಿದೆ.

ಬೆಂಗಳೂರು ಬಂದ್

ಈ ಹಿಂದೆ ಹೆಚ್ಚುವರಿ ಜನಸಂದಣಿ ಇರುವ ಸಮಯದಲ್ಲಿ ಮಾತ್ರ ಐದು ನಿಮಿಷಕ್ಕೊಂದು ಮೆಟ್ರೋ ಸಂಚಾರ ನಡೆಸುತ್ತಿತ್ತು. ಸೆ. 11ರಂದು ಖಾಸಗಿ ವಾಹನಗಳ ಸಂಚಾರ ಬಂದ್ ಇರುವ ಕಾರಣ ಇವತ್ತು ಕೂಡ ಐದು ನಿಮಿಷಕ್ಕೊಂದು ಮೆಟ್ರೋ ಸಂಚಾರ ನಡೆಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಬಿಎಂಟಿಸಿ : 4000 ಹೆಚ್ಚುವರಿ ಟ್ರಿಪ್

ನಾನಾ ಖಾಸಗಿ ಸಾರಿಗೆಗಳ ಒಕ್ಕೂಟಗಳು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ಬಸ್‌ಗಳು ಸೆ.11 ರಂದು ಕಾರ್ಯಾಚರಣೆ ನಡೆಸಲಿವೆ.

ಬೆಂಗಳೂರು ನಗರ ಹಾಗೂ ಹೊರವಲಯದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ 5601 ಅನುಸೂಚಿಗಳಿಂದ 57,450 ಟ್ರಿಪ್ ಕಾರ್ಯಾಚರಣೆಗೊಳಿಸುತ್ತಿದೆ.

ಬಂದ್‌ ಇರುವ ಹಿನ್ನೆಲೆ, ಬೆಂಗಳೂರಿನ ಶಾಲಾ/ಕಾಲೇಜು ಮಕ್ಕಳು ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ, ನಗರದ ಪ್ರಮುಖ ಬಸ್ ನಿಲ್ದಾಣಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ಬನ್ನೇರುಘಟ್ಟ/ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ, ನೆಲಮಂಗಲ, ಹೆಸರಘಟ್ಟ, ದೊಡ್ಡಬಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆಗೆ ಹಾಗೂ ಹೊರ ವರ್ತುಲ/ಒಳ ವರ್ತುಲ ರಸ್ತೆಗಳಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ 500 ಅನುಸೂಚಿಗಳಿಂದ ಸುಮಾರು 4000 ಹೆಚ್ಚುವರಿ ಟ್ರಿಪ್ ಕಾರ್ಯಾಚರಣೆ ನಡೆಸಲು ಯೋಜನೆ ರೂಪಿಸಿದೆ ಎಂದು ತಿಳಿಸಿದೆ.

ಕೆಲವೆಡೆ ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದಲ್ಲಿ ಅಂತಹ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಮಾರು 100 ಹೆಚ್ಚುವರಿ ಟ್ರಿಪ್ ಕಲ್ಪಿಸಲಾಗಿದ್ದು, ಬೇಡಿಕೆಗನುಗುಣವಾಗಿ ಇನ್ನು ಹೆಚ್ಚಿನ ಟ್ರಿಪ್ ವ್ಯವಸ್ಥೆ ಮಾಡಲಾಗುವುದು ಎಂದು ಈ ದಿನ.ಕಾಮ್‌ಗೆ ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಹೇಳಿದರು.

ಸಂಚಾರ ಬದಲಾವಣೆ

ಖಾಸಗಿ ವಾಹನಗಳ ಬಂದ್ ಇರುವ ಹಿನ್ನೆಲೆ, ಕೇಂದ್ರ ರೈಲ್ವೆ ನಿಲ್ದಾಣದಿಂದ ಖಾಸಗಿ ವಾಹನಗಳ ರ‍್ಯಾಲಿ ಏರ್ಪಡಿಸಲಾಗಿದೆ. ಹಾಗಾಗಿ, ಖೋಡೆ ಸರ್ಕಲ್‍ಗೆ ಬರುವ ವಾಹನಗಳು, ಆರ್.ಆರ್.ಜಂಕ್ಷನ್ ಮೂಲಕ ಕೃಷ್ಣ ಫ್ಲೋರ್, ಮಲ್ಲೇಶ್ವರಂ ಕಡೆಗೆ ತೆರಳಬೇಕು. ಗೂಡ್‍ಶೆಡ್ ರಸ್ತೆ ಕಡೆಯಿಂದ ಬರುವ ವಾಹನಗಳು, ಜಿ.ಟಿ.ರಸ್ತೆ ಮುಖಾಂತರ ಸಂಗೊಳ್ಳಿರಾಯಣ್ಣ ಸರ್ಕಲ್, ಓಕಳಿಪುರಂ, ಸುಜಾತ ರಸ್ತೆಯಲ್ಲಿ ತೆರಳಬೇಕು.

ಆನಂದ್‍ರಾವ್ ಸರ್ಕಲ್ ಕಡೆಯಿಂದ ಬರುವ ವಾಹನಗಳು, ಹಳೇ ಜೆಡಿಎಸ್ ರಸ್ತೆ ಹಾಗೂ ಶೇಷಾದ್ರಿಪುರಂ ರಸ್ತೆ ಕಡೆಗೆ ಹೋಗುವುದು. ಮೈಸೂರು ಬ್ಯಾಂಕಿನಿಂದ ಬರುವ ವಾಹನಗಳು, ಪ್ಯಾಲೇಸ್ ರಸ್ತೆ, ಮಹಾರಾಣಿ ಅಂಡರ್‌ಪಾಸ್‌, ಬಸವೇಶ್ವರ ಸರ್ಕಲ್ ಮುಖಾಂತರ ಸಂಚರಿಸುವುದು ಎಂದು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X