- ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
- ಚಿಕಿತ್ಸೆ ಫಲಕಾರಿಯಾಗದೇ ಕೆಲ ಗಂಟೆಗಳ ಬಳಿಕ ಸಾವನ್ನಪ್ಪಿದ ಮಹಿಳೆ
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ವಯೋವೃದ್ಧ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಕೋಡಿಗೆಹಳ್ಳಿಯ ಗಂಗಾ ಭವಾನಿ ರಸ್ತೆಯ ನಿವಾಸಿ ಮುನಿಯಮ್ಮ (61) ಎಂದು ಗುರುತಿಸಲಾಗಿದೆ. ಇವರು ವಿಧಾನಸೌಧದ ನಿವೃತ್ತ ‘ಡಿ’ ಗ್ರೂಪ್ ಉದ್ಯೋಗಿಯಾಗಿದ್ದರು. ಸೋಮವಾರ ಮಧ್ಯಾಹ್ನ 1.45 ರ ಸುಮಾರಿಗೆ ಹಡ್ಸನ್ ಸರ್ಕಲ್ ಬಳಿ ಮಹಿಳೆ ರಸ್ತೆ ದಾಟುತ್ತಿದ್ದಾಗ ಹಿಂಬದಿಯಿಂದ ಬಂದ ಬಿಬಿಎಂಪಿಗೆ ಸೇರಿದ ಕಸದ ಲಾರಿ ವೇಗವಾಗಿ ಡಿಕ್ಕಿ ಹೊಡೆದಿದೆ.
ಮಹಿಳೆಯ ಕಾಲುಗಳ ಮೇಲೆ ಲಾರಿ ಹರಿದ ಪರಿಣಾಮ ತೀವ್ರ ರಸ್ತಸ್ರಾವವಾಗಿದೆ. ಸಮೀಪದಲ್ಲಿದ್ದ ಕಾನ್ಸ್ಟೆಬಲ್ ಯೋಗೇಶ್ ಎಸ್, ದಾರಿಹೋಕರ ಸಹಾಯದಿಂದ ಮುನಿಯಮ್ಮ ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೆಲ ಗಂಟೆಗಳ ಬಳಿಕ ಮಹಿಳೆ ಕೊನೆಯುಸಿರೆಳೆದಿದ್ದಾಳೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಲಾರಿ ಜಪ್ತಿ ಮಾಡಿ ಚಾಲಕ ಶಿವಕುಮಾರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸೂರು ಗೇಟ್ ಸಂಚಾರ ಪೊಲೀಸರು ಐಪಿಸಿ ಸೆಕ್ಷನ್ 279 (ಅತಿವೇಗದ ಚಾಲನೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಟ್ರಕ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ವರ್ಷ ರೂ. 4,600 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲು ಗುರಿ ನಿಗದಿಪಡಿಸಿದ ಬಿಬಿಎಂಪಿ
ಬೆಂಗಳೂರು | ಬೈಕ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು
ಬೆಂಗಳೂರಿನ ಹೆಸರಘಟ್ಟದಲ್ಲಿ ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
22 ವರ್ಷದ ರಾಕೇಶ್ ಎಚ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ನಗರದ ಈಶಾನ್ಯ ಭಾಗದಲ್ಲಿರುವ ಖಾಸಗಿ ತಂತ್ರಜ್ಞಾನ ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಟಿಬಿ ಕ್ರಾಸ್ ಬಳಿ ರಾಕೇಶ್ ಅವರು ಹೆಸರಘಟ್ಟದ ತಮ್ಮ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಜಾಲಹಳ್ಳಿ ಸಂಚಾರ ಪೊಲೀಸರು ತಿಳಿಸಿದ್ದಾರೆ.
“ಮತ್ತೊಬ್ಬ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎರಡೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.