ಬೆಂಗಳೂರು ಗ್ರಾಮಾಂತರ | ದನಗಳ ಮೈ ತೊಳೆಯಲು ಹೋಗಿದ್ದ ರೈತ ನೀರುಪಾಲು

Date:

ದನಗಳ ಮೈ ತೊಳೆಯಲು ಕೆರೆಗೆ ಇಳಿದಿದ್ದ ರೈತರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಒಡೇರಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಜಾಲಿಕಟ್ಟೆಯಲ್ಲಿ ಮಂಗಳವಾರ ದನಗಳ ಮೈ ತೊಳೆಯುವಾಗ ರೈತ ಕಾಲು ಜಾರಿ ಬಿದ್ದು, ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ರೈತನನ್ನು ರಾಮಪುರ ಗ್ರಾಮದ ಕುಮಾರ್ (44) ಎಂದು ಗುರುತಿಸಲಾಗಿದೆ.

ದನಗಳು ಮನೆಗೆ ಹಿಂದಿರುಗಿ ಬಂದಿವೆ. ಆದರೆ, ಕುಮಾರ್ ಅವರು ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಬುಧವಾರ ಬೆಳಗ್ಗೆ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...