ಬೆಂಗಳೂರು | ಸಂಚಾರ ದಟ್ಟಣೆಯ ಸಮಸ್ಯೆಗೆ ಮಾರ್ಗಸೂಚಿ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್‌ ಮುಂದುವರೆಸಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

ಬೆಂಗಳೂರು ಪ್ರದಕ್ಷಿಣೆ ಹಾಕುವ ವೇಳೆ ಡಿಕೆಶಿ ಅವರು ಮೊದಲು ಹೆಬ್ಬಾಳ ಜಂಕ್ಷನ್‌ಗೆ ಭೇಟಿ ನೀಡಿ ಮೇಲ್ಸೇತುವೆ ನಿರ್ಮಾಣ, ಸುತ್ತಮುತ್ತಲ ಪ್ರದೇಶದ ಪರಿಶೀಲನೆ ನಡೆಸಿದರು.

ಈ ವೇಳೆ, ಹೆಬ್ಬಾಳದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ, ಮೇಲ್ಸೇತುವೆ ಅಗಲೀಕರಣ ಹಾಗೂ ಹೆಬ್ಬಾಳ ಕೆರೆಯ ಸೌಂದರ್ಯಕ್ಕೆ ಕೈಗೊಳ್ಳುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Advertisements

2047ರ ವೇಳೆಗೆ ಹೆಚ್ಚಾಗುವ ವಾಹನ ದಟ್ಟಣೆಗೆ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ವಿವರಣೆ ನೀಡಿದ ಡಿಸಿಎಂ ಅವರು 63 ಕಿ.ಮೀ. ಅವಳಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಸಲಹೆ ನೀಡಿದರು.

ಹೊರ ವರ್ತುಲ ರಸ್ತೆ, ನಾಗವಾರ ಮೇಲ್ಸೇತುವೆ, ಟೆಲಿಕಾಂ ಲೇಔಟ್ ಗೆ ಭೇಟಿ ಮಾಡಿ ಅಲ್ಲಿ ನಡೆಯುತ್ತಿರುವ ಕೊಳಚೆ ನೀರು ಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ವಿಟ್ಟಸಂದ್ರದ ಕಸದ ರಾಶಿ ತೆರವುಗೊಳಿಸದ ಬಿಬಿಎಂಪಿ; ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ ಲೋಕಾಯುಕ್ತ

ಮಳೆ ಬಂದಾಗ ಜಲಾವೃತವಾಗುತ್ತಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ರಾಜಕಾಲುವೆ, ತಡೆಗೋಡೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಪರಿಶೀಲನೆ ನಡೆಸಿದರು. ಹೊರ ವರ್ತುಲ ರಸ್ತೆ, ಕಲ್ಯಾಣನಗರ, ಹೆಚ್.ಆರ್.ಬಿ.ಆರ್. ಬಡಾವಣೆಗೆ ಭೇಟಿ ನೀಡಿ ಕೊಳಚೆ ನೀರು ಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿದರು. ಕೆ.ಆರ್. ಪುರಂಗೆ ಭೇಟಿ ನೀಡಿ ಬಿ.ಎಂ.ಆರ್.ಸಿ.ಎಲ್. ನಡೆಸುತ್ತಿರುವ ಮೆಟ್ರೋ ಕಾಮಗಾರಿ ಪರಿಶೀಲನೆ ನಡೆಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X