ಬೆಂಗಳೂರು | ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಏಕಗವಾಕ್ಷಿ ಪದ್ಧತಿ ಜಾರಿ

Date:

Advertisements

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದ್ದು, ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ, ಶೀಘ್ರವಾಗಿ ಅನುಮತಿ ನೀಡಬೇಕು. ಹಾಗಾಗಿ, ಏಕಗವಾಕ್ಷಿ ಪದ್ದತಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಒದಗಿಸಿ, ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯಬಹುದಾಗಿದೆ” ಎಂದು ಹೇಳಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದೆ.

Advertisements

“ಗಣೇಶ ಹಬ್ಬದ ಹಿನ್ನೆಲೆ ಎಲ್ಲೆಡೆ ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿ ಮಾಡುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡಬೇಕು” ಎಂದು ಹೇಳಿದೆ.

63 ಏಕಗವಾಕ್ಷಿ ಕೇಂದ್ರಗಳ ಮಾಹಿತಿ ಹಾಗೂ ಇಲಾಖಾವಾರು ನೋಡಲ್ ಅಧಿಕಾರಿಗಳ ವಿವರ ಮತ್ತು ದೂರವಾಣಿ ಸಂಖ್ಯೆ

“ಪರಿಸರಕ್ಕೆ ಹಾನಿಯನ್ನುಂಟು ಮಾಡುವಂತಹ ಗಣೇಶ ಮೂರ್ತಿಗಳ ತಯಾರು ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸದರಿ ತಯಾರಿಕೆ ಮಾಡಿರುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದೆ.

“ಹಬ್ಬದ ಆಚರಣೆಯಿಂದ ಉತ್ಪತ್ತಿಯಾಗುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸಬೇಕು. ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಲಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು” ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶವನ್ನು ಹೊರಡಿಸಿದ್ದಾರೆ.

ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುವುದು.

ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೆಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಜನರಲ್ಲಿ ಅರಿವು ಮೂಡಿಸಬೇಕು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಕೋರಿದ್ದ ಪಿಐಎಲ್‌ ವಜಾ

ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಿಸರ್ಜನೆ ಸ್ಥಳಗಳನ್ನು ಗುರುತಿಸಿ, ಈ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವುದು. ಅವಶ್ಯವಿದ್ದಲ್ಲಿ ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆ ಅಗತ್ಯ ವ್ಯವಸ್ಥೆ ಕೈಗೊಳ್ಳುವುದು.

ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು, ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸುವುದು. ಗಣೇಶ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಿ ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಹಾಗೂ ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸುವುದು.

ವಿಸರ್ಜನ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸುವುದು. ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸಬೇಕು.

ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡ್‌ಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸಬೇಕು.

ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳಬೇಕು. ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುವುದು ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X