ಬೆಂಗಳೂರು | ತಿಲಕನಗರದ ಎಂ.ಎಸ್ ಕಟ್ಟಡದ ದುರಸ್ಥಿ ಕಾಮಗಾರಿಗೆ ಸೂಚನೆ

Date:

Advertisements
  • 50 ವರ್ಷ ಹಳೆಯದಾಗಿರುವ ಎಂ.ಎಸ್‌ ಕಟ್ಟಡ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲು ಅನುದಾನ
  • ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ ಉದ್ಯಾನವನ ಹಾಗೂ ಆಟದ ಮೈದಾನ ನಿರ್ಮಾಣ

ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯ ಪಾಲಿಕೆ ಜಾಗದಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣ ಮಾಡಿರುವ ಎಂ.ಎಸ್ ಕಟ್ಟಡಕ್ಕೆ 50 ವರ್ಷಗಳಾಗಿವೆ. ಈ ಕಟ್ಟಡದಲ್ಲಿ 64 ಮನೆಗಳಿದ್ದು, ಇಲ್ಲಿ ವಾಸಿಸುವ ನಿವಾಸಿಗಳಿಗೆ ಪಾಲಿಕೆ ವತಿಯಿಂದ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಕಟ್ಟಡ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ದುರಸ್ಥಿ ಕಾಮಗಾರಿ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ತಿಲಕನಗರ ವ್ಯಾಪ್ತಿಯಲ್ಲಿ ಬರುವ ಎಂ.ಎಸ್ ಕಟ್ಟಡ ಹಾಗೂ ರಾಗಿ ಗುಡ್ಡದ ಬಳಿ ಇರುವ ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಸ್ಥಳೀಯ ಶಾಸಕ ಸಿ.ಕೆ ರಾಮಮೂರ್ತಿ ಹಾಗೂ ವಲಯ ಆಯುಕ್ತ ಜಯರಾಮ್ ರಾಯಪುರ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಬಿಎಂಪಿ ವಲಯ ಆಯುಕ್ತ ಜಯರಾಮ್‌ ರಾಯಪುರ, “ಎಂ.ಎಸ್ ಕಟ್ಟಡಕ್ಕೆ 50 ವರ್ಷಗಳಾಗಿದ್ದು, ತುಂಬಾ ಹಳೆಯದಾಗಿರುವುದರಿಂದ ಅದನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ಅನುದಾನ ಮೀಸಲಿಡಲಾಗಿತ್ತು. ಆದರೆ, ಕಟ್ಟಡದಲ್ಲಿ ವಾಸವಿರುವ ನಿವಾಸಿಗಳು ಕಟ್ಟಡ ತೆರವುಗೊಳಿಸಿ ನಿರ್ಮಾಣ ಮಾಡಲು ಸಾಕಷ್ಟು ಸಮಯಾವಕಾಶ ಬೇಕಿದೆ. ಈ ಸಂಬಂಧ ಹಾಲಿ ಕಟ್ಟಡದಲ್ಲಿ ವಾಸವಿರುವ ಎಲ್ಲ ಕುಟುಂಬಗಳಿಗೆ ಖಾಲಿ ನಿವೇಶನ(ಸೈಟ್) ನೀಡಲು ಮನವಿ ಮಾಡಿದರು. ಇದಕ್ಕೆ ವಲಯ ಆಯುಕ್ತರು ಪ್ರತಿಕ್ರಿಯಿಸಿ, ಎಂ.ಎಸ್ ಕಟ್ಟಡದಲ್ಲಿ ವಾಸವಿರುವ ನಿವಾಸಿಗಳಿಗೆ ಸೈಟ್ ನೀಡುವ ವಿಚಾರವಾಗಿ ನಿಯಮಾನುಸಾರ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

Advertisements

ಒಣ ತ್ಯಾಜ್ಯ ಸಂಗ್ರಹಣಾ ಘಟಕ ಪರಿಶೀಲನೆ

ರಾಗಿಗುಡ್ಡ ಸ್ಲಂ ಬಳಿಯಿರುವ ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಲಯ ಆಯುಕ್ತ, “ಒಣ ತ್ಯಾಜ್ಯ ಸಂಹ್ರಹಣಾ ಘಟಕವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಇದೇ ಸ್ಥಳದಲ್ಲಿ ಸುಮಾರು 2 ಎಕರೆಯ ಪಾಲಿಕೆಯ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಶೆಡ್‌ಗಳನ್ನು ನಿರ್ಮಾಣ ಮಾಡಿಕೊಂಡು ವಾಸವಿದ್ದಾರೆ. ಈ ಪೈಕಿ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ ಉದ್ಯಾನವನ ಹಾಗೂ ಆಟದ ಮೈದಾನವನ್ನು ನಿರ್ಮಾಣ ಮಾಡಬೇಕು” ಎಂದು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಜೋಡಿ ಹತ್ಯೆ ಪ್ರಕರಣ | ಸುಪಾರಿ ನೀಡಿದ್ದ ಜಿ ನೆಟ್ ಕಂಪನಿ ಮಾಲೀಕನ ಬಂಧನ

ಈ ವೇಳೆ ವಲಯ ಮುಖ್ಯ ಅಭಿಯಂತರ ರಾಜೇಶ್, ಕಾರ್ಯಪಾಲಕ ಅಭಿಯಂತರ ಮಹಾಂತೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

e4c01bd9b2970ccfecae47b47af65a36?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X