ಬೆಂಗಳೂರಿನಲ್ಲಿರುವ ಹಲವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಆರ್‌ಟಿಒ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಏಕಕಾಲದಲ್ಲಿ ಕಚೇರಿಗಳ ಮೇಲೆ ದಾಳಿ ನಡೆದಿದೆ.
ಕಚೇರಿಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ಕಚೇರಿಯಲ್ಲಿರುವ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದು, ಅಧಿಕಾರಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒತ್ತುವರಿ ತೆರವು ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ: ತುಷಾರ್ ಗಿರಿನಾಥ್
ಜಯನಗರ ಮತ್ತು ರಾಜಾಜಿನಗರ ಆರ್‌ಟಿಒ ಕಚೇರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಮತ್ತು ಯಶವಂತಪುರ ಆರ್‌ಟಿಒ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.