ಬೆಂಗಳೂರು | ಗಲಾಟೆಗೆ ಸಂಬಂಧವಿಲ್ಲದವ ಜಗಳದಲ್ಲಿ ಜೋಶ್‌ ಬೇಕೆಂದು ಚಾಕು ಇರಿದ: ಬಂಧನ

Date:

Advertisements
  • ಎರಡು ಗುಂಪುಗಳ ನಡುವೆ ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ
  • ರೇವಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ವೇಳೆ ಈ ಘಟನೆ ನಡೆದಿದೆ

ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ ಮೂರು ದಿನಗಳ ಬಳಿಕ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ. ಈತ ಮೂಲತಃ ಗುಜರಾತ್ ರಾಜ್ಯದವನು. ನಗರದ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದನು. ಕಾಲೇಜು ಕಾರ್ಯಕ್ರಮದಲ್ಲಿ ಆರೋಪಿ ಭರತೇಶ್ ಮತ್ತು ಮೃತ ಭಾಸ್ಕರ್‌ ಜೆಟ್ಟಿ ನಡುವೆ ಗಲಾಟೆ ನಡೆದಿತ್ತು. ಪ್ರಕರಣ ಸಂಬಂಧ ಕಳೆದ ಭಾನುವಾರವೇ ಭರತೇಶ್‌ನನ್ನು ಬಂಧಿಸಲಾಗಿತ್ತು.

ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ ಪ್ರಮುಖ ಆರೋಪಿ ಅನಿಲ್ ಮತ್ತು ಗಲಾಟೆ ಮಾಡಿದ್ದ ಮತ್ತೊಬ್ಬ ಆರೋಪಿ ಶೃಂಗ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Advertisements

ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಪ್ರತಿ ವರ್ಷದ ಆಚರಣೆಯಂತೆ ಈ ವರ್ಷವೂ ಕಾಲೇಜು ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿವೆ. ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ ಕೂಡ ಒಂದು ಗುಂಪಿನಲ್ಲಿ ಭಾಗವಹಿಸಿದ್ದನು ಎಂದು ತಿಳಿದುಬಂದಿದೆ. ತೀವ್ರ ವಿಕೋಪಕ್ಕೆ ತಿರುಗಿದ ಗಲಾಟೆಯಲ್ಲಿ ಭಾಸ್ಕರ್ ಜೆಟ್ಟಿ ಎಂಬ ವಿದ್ಯಾರ್ಥಿಯನ್ನು ಭೀಕರವಾಗಿ ವಿದ್ಯಾರ್ಥಿಗಳು ಕೊಲೆ ಮಾಡಿದ್ದಾರೆ ಎಂದು ಮೊದಲ ಹಂತದಲ್ಲಿ ತಿಳಿದುಬಂದಿತ್ತು.

ಗಲಾಟೆ ನಡೆದು ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಕಾಲೇಜು ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಲೇಜು ಸಮಾರಂಭವನ್ನು ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದರು. ಕೊಲೆಯ ಘಟನೆಯ ಬಗ್ಗೆ ಕಾಲೇಜು ಆವರಣದೊಳಗಿನ ಎಲ್ಲ ಸಿಸಿಟಿವಿ ಫೂಟೇಜ್‌ಗಳನ್ನು ಬಾಗಲೂರು ಪೊಲೀಸರು ಪರಿಶೀಲನೆ ಮಾಡಿದ್ದರು. ಅನುಮಾನಾಸ್ಪದ ಯುವಕರನ್ನು ವಶಕ್ಕೆ ಪಡೆದಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

ಪೊಲೀಸ್‌ ವಿಚಾರಣೆಯ ಬಳಿಕ ಹೊರಬಂದ ಸತ್ಯ

ಕಾಲೇಜು ಕಾರ್ಯಕ್ರಮದಲ್ಲಿ ಆರೋಪಿ ಭರತೇಶ್ ಮತ್ತು ಮೃತ ಭಾಸ್ಕರ್‌ ಜೆಟ್ಟಿ ನಡುವೆ ಗಲಾಟೆ ನಡೆದಿತ್ತು. ಆದರೆ, ಆರೋಪಿ ಅನಿಲ್ ಎಂಬಾತನಿಗೂ ಈ ಗಲಾಟೆಗೂ ಸಂಬಂಧವಿಲ್ಲದಿದ್ದರೂ, ಜಗಳದಲ್ಲಿ ಹೆಚ್ಚಿನ ಜೋಶ್‌ ಬರಬೇಕು ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಭರತ್‌ ಜೆಟ್ಟಿ ಎದೆಗೆ ಬಿಕಾಂ ಓದುತ್ತಿದ್ದ ಅನಿಲ್‌ ಎಂಬಾತ ಚಾಕುವನ್ನು ಚುಚ್ಚಿದ್ದಾನೆ.

ದುರದೃಷ್ಟಕರ ಸಂಗತಿ ಎಂದರೆ, ಯುವಕನ ಎದೆಗೆ ಚುಚ್ಚಿದ ಚಾಕು ಜೆಟ್ಟಿಯ ಎದೆಯೊಳಗೆ ಇಳಿದು, ತೀವ್ರ ರಕ್ತಸ್ರಾವವಾಗಿ ಭಾಸ್ಕರ್‌ ಕುಸಿದು ಬೀಳುತ್ತಿದ್ದಂತೆ, ಆತ ಸಾವನ್ನಪ್ಪಿದ್ದಾನೆ. ಈ ಘಟನೆಯ ಬೆನ್ನಲ್ಲೇ ಕೊಲೆ ಆರೋಪಿಗಳು ಕಾರಿನಲ್ಲಿ ಮೂಡಿಗೆರೆಗೆ ಪರಾರಿಯಾಗಿದ್ದಾರೆ. ಅರಣ್ಯದ ತಗ್ಗು ಪ್ರದೇಶವೊಂದರಲ್ಲಿ ತಲೆಮರೆಸಿಕೊಂಡಿದ್ದರು.

ಆರೋಪಿಗಳ ಸ್ನೇಹಿತನ ಫೋನ್ ಜಾಡು ಹಿಡಿದ ಬಾಗಲೂರು ಪೊಲೀಸರು, ಮೂಡಿಗೆರೆಯ ಅರಣ್ಯದ ತಗ್ಗು ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಅನಿಲ್‌ ಮತ್ತು ಶೃಂಗ ಎಂಬಾತನನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X