ಇಸ್ರೋ ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌತನಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಆಗಸ್ಟ್ 24ರ ರಾತ್ರಿ 12:45ರ ವೇಳೆ ಇಸ್ರೋ ವಿಜ್ಞಾನಿ ಅಶುತೋಷ್ ಸಿಂಗ್ ಅವರು ತಮ್ಮ ಕ್ವಿಡ್ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ, ಅವರ ಕಾರನ್ನು ಹಿಂಬಾಲಿಸಿದ ಅಪರಿಚಿತ ವ್ಯಕ್ತಿಗಳು, ಹಿಂಬದಿಯಿಂದ ಕಾರ್ ಗ್ಲಾಸ್‌ಗೆ ಕಲ್ಲು ಎಸೆದಿದ್ದಾರೆ. ಕಾರ್ ಅನ್ನು ಹಿಂಬಾಲಿಸಿದ ವ್ಯಕ್ತಿಗಳು ರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಸಿಂಗ್ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕ ಉನ್ನತೀಕರಣ
“ಆ.24ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಕಲ್ಲು ಎಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.