ಶನಿವಾರ ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಹಲವೆಡೆ ಮೆರವಣಿಗೆ ನಡೆಯಲಿದೆ. ಹಾಗಾಗಿ, ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಶನಿವಾರ ಸಂಚಾರ ಮಾರ್ಗದಲ್ಲಿ ಬದಲಾವಣೆಯಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಹೇಳಿದ್ದಾರೆ.
“ಬ್ರಿಗೇಡ್ ರಸ್ತೆಯ ಮೂಲಕ ಹೊಸೂರು ರಸ್ತೆಯ ಕಡೆಗೆ ವೆಲ್ಲಾರಾ ಜಂಕ್ಷನ್ ಮುಖಾಂತರ ತೆರಳುವ ವಾಹನ ಸವಾರರು ರಿಚ್‌ಮಂಡ್ ರಸ್ತೆಯ ಮೂಲಕ ರೀನಿಯಸ್ ಕ್ರಾಸ್, ನಂಜಪ್ಪ ಸರ್ಕಲ್ ಲಾಂಗ್ ಫೋರ್ಡ್ ರಸ್ತೆ, ಸಿಎಂಪಿ ಜಂಕ್ಷನ್ ಮೂಲಕ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ನಗರ ಸಂಚಾರ ಪೊಲೀಸ್ ಟ್ವೀಟ್ ಮೂಲಕ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಧ್ಯರಾತ್ರಿ ಫುಡ್ ಡೆಲಿವರಿ ಬಾಯ್ ಮೇಲೆ ಬೀದಿ ನಾಯಿಗಳನ್ನು ಛೂ ಬಿಟ್ಟ ಅಮ್ಮ, ಮಗ
“ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಸಿಮೆಂಟ್ರ ಕ್ರಾಸ್, ಬರ್ಲ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಸರ್ಕಲ್, ರೀನಿಯಸ್ ಸ್ಟ್ರೀಟ್ ಮೂಲಕ ರಿಚ್‌ಮಂಡ್ ರಸ್ತೆಗೆ ಬಂದು ಸಂಚರಿಸುವುದು. ಹೊಸೂರು ರಸ್ತೆ ಕಡೆಯಿಂದ ಬರುವ ಭಾರೀ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ಧಯ್ಯ ರಸ್ತೆ ಮೂಲಕ ಸಂಚರಿಸಬೇಕು” ಎಂದು ಸೂಚಿಸಿದೆ.