- 100 ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು
- ಏ. 20ರಂದು 500ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆದಿತ್ತು
ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದೀಗ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದು, ರೌಡಿಶೀಟರ್ ಆಸಿಫ್ ಮನೆಯಲ್ಲಿ 105 ಕೆಜಿ ಗಾಂಜಾ ಮತ್ತು ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೊಲ್ಲು ಇಮ್ರಾನ್, ಅನಿಸ್, ಅಬ್ಬಾಸ್, ಸಾಧಿಕ್, ಶಾಕಿರ್, ಇರ್ಫಾನ್, ಯೂಸೂಫ್ ಸೇರಿದಂತೆ 100 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಮನೆಗಳಲ್ಲಿದ್ದ ಡ್ರಗ್ಸ್, ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏ.25ರಂದು ನಿಮ್ಮ ನೆರಳು ನಿಮಗೆ ಕಾಣಿಸುವುದಿಲ್ಲ!
ಏ. 20ರಂದು 500ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು
ಇದೇ ತಿಂಗಳ ಏ. 20ರಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೂಚನೆ ಮೇರೆಗೆ ಎಲ್ಲ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ 500ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆದಿತ್ತು. ಈ ದಾಳಿ ವೇಳೆ ವಾರಂಟ್ ಪೆಂಡಿಂಗ್ ಇದ್ದ ಕೆಲ ರೌಡಿಗಳ ಮನೆಯಲ್ಲಿ ಮಚ್ಚು, ಲಾಂಗು ಸೇರಿದಂತೆ ಇನ್ನಿತರ ಮಾರಕಾಸ್ತ್ರಗಳು ಪತ್ತೆಯಾಗಿದ್ದವು.