ಬೆಂಗಳೂರು | ಗೃಹಲಕ್ಷ್ಮಿ ಯೋಜನೆಗೆ 6 ಲಕ್ಷ ಫಲಾನುಭವಿಗಳ ಹೆಸರು ನೋಂದಣಿ

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯನ್ನು ಬುಧವಾರ ಮೈಸೂರಿನಲ್ಲಿ ಜಾರಿ ಮಾಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹2000 ಹಣ ವರ್ಗಾವಣೆ ಮಾಡುವ ಯೋಜನೆ ಇದಾಗಿದೆ. ಎಲ್ಲೆಡೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಸುಮಾರು 6,16,480 ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಪಾಲಿಕೆಯ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ನಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು. ಜತೆಗೆ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಶೈಲಜಾ, ಲೀಲಾ, ಲಲಿತಾ, ರಾಧ, ಗೌರಿ ಹಾಗೂ ಯಲ್ಲಮ್ಮ ಎಂಬುವವರಿಗೆ ಬಹುಮಾನ ವಿತರಣೆ ಮಾಡಲಾಯಿತು.

Advertisements

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | ಮುಖ್ಯ ಎಂಜಿನಿಯರ್ ಪ್ರಹ್ಲಾದ್‌ಗೆ ಮತ್ತೊಮ್ಮೆ ನೋಟಿಸ್ ಜಾರಿ ಸಾಧ್ಯತೆ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ₹2000 ನೀಡುವ ಯೋಜನೆ ಇದಾಗಿದೆ. ಸದ್ಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ” ಎಂದು ಹೇಳಿದರು.

“ಪೂರ್ವ, ಪಶ್ಚಿಮ, ದಕ್ಷಿಣ ವಲಯದಲ್ಲಿ ತಲಾ 44, ಬೊಮ್ಮನಹಳ್ಳಿಯಲ್ಲಿ 16, ಮಹದೇವಪುರದಲ್ಲಿ 17, ಯಲಹಂಕದಲ್ಲಿ 11, ದಾಸರಹಳ್ಳಿಯಲ್ಲಿ 8 ಹಾಗೂ ರಾಜರಾಜೇಶ್ವರಿ ನಗರ ವಲಯದಲ್ಲಿ 14 ಕಡೆಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡಲಾಗಿದೆ. ಪ್ರತಿಯೊಂದು ವಾರ್ಡ್‌ಗೆ ನೋಡಲ್ ಅಧಿಕಾರಿ ನಿಯೋಜಿಸಲಾಗಿದೆ” ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ಜಯರಾಮ್ ರಾಯಪುರ, ಡಾ. ಹರೀಶ್ ಕುಮಾರ್, ಆರ್.ಎಲ್ ದೀಪಕ್, ದಕ್ಷಿಣ ವಲಯ ಜಂಟಿ ಆಯುಕ್ತ ಡಾ. ಕೆ. ಜಗದೀಶ್ ನಾಯ್ಕ್, ಗೃಹಲಕ್ಷ್ಮಿ ಯೋಜನೆಯ ನೋಡಲ್ ಅಧಿಕಾರಿಯಾದ ಲಕ್ಷ್ಮಿದೇವಿ, ಗೃಹಲಕ್ಷ್ಮಿ ಯೋಜನೆ ಸೌಲಭ್ಯದ ಫಲಾನುಭವಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X