ಬೆಂಗಳೂರು ಗ್ರಾಮಾಂತರ | ಎಟಿಎಂ ಹಣ ದೋಚಲು ಯತ್ನ; ಸಾವಿರಾರು ರೂಪಾಯಿ ಬೆಂಕಿಗಾಹುತಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಎಟಿಎಂ ಕಳ್ಳತನಕ್ಕೆ ವಿಫಲಯ ಯತ್ನ ನಡೆದಿದ್ದು, ಮುಂಬೈ ಆಕ್ಸಿಸ್​​ ಬ್ಯಾಂಕ್​​ ಅಧಿಕಾರಿಗಳಿಂದ ಮಾಹಿತಿ ತಿಳಿದ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದಾಗ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.

ಇಬ್ಬರು ಕಳ್ಳರು ಬುಧವಾರ ರಾತ್ರಿ 1-50ರ ಸುಮಾರಿಗೆ ನೆಲಮಂಗಲ ಟೌನ್ ಬಳಿ ಇರುವ ಎಟಿಎಂಗೆ ನುಗ್ಗಿ ಕಟರ್ ಮೂಲಕ ಎಟಿಎಂ ಯಂತ್ರ ಕಟ್ ಮಾಡಲು ಯತ್ನಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಮುಂಬೈ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು ಕಟ್ಟಡ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ವಿದ್ಯಾರ್ಥಿನಿಯರ ಜೊತೆ ಐಟಂ ಡಾನ್ಸ್‌; ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾಲೀಕರು ಸ್ಥಳಕ್ಕೆ ಬರುತ್ತಿದ್ದಂತೆ ಕಳ್ಳರು ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಆದರೆ, ಗ್ಯಾಸ್ ಕಟರ್ ಬಳಸಿ ಯಂತ್ರವನ್ನು ಕಟ್ ಮಾಡುವ ವೇಳೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಸುಟ್ಟು ಹೋಗಿವೆ. ಬ್ಯಾಂಕ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...