ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ ರೋಗಕ್ಕೆ ತುತ್ತಾದ ಹುಳುಗಳು, ಹಣ್ಣಾಗುವ ಬದಲು ಹಾಲುವಾಂತಿ ಮಾಡಿಕೊಂಡು ಸಾಯುತ್ತವೆ ಎಂದು ರೇಷ್ಮೆ ಬೆಳೆಗಾರರು ಕಳವಳ ವ್ಯಕ್ತಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ. ಸಂಜೆಯ ವೇಳೆ ಹೆಚ್ಚು ತಂಪಾದ ವಾತಾವರಣ ಇರುತ್ತದೆ. ಹಗಲಿನಲ್ಲಿ ಮೋಡ ಮುಸುಕಿದ ವಾತಾವರಣದೊಂದಿಗೆ ತುಂತುರು ಮಳೆ ಹನಿಗಳು ನಿರಂತರವಾಗಿ ಬೀಳುತ್ತಿವೆ. ಇದರಿಂದಾಗಿ ರೇಷ್ಮೆಹುಳು ಸಾಕಾಣಿಕೆ ಮನೆಗಳಲ್ಲಿ ಉಷ್ಣಾಂಶ ಕಾಪಾಡಿಕೊಳ್ಳುವುದು ಹಾಗೂ ರೇಷ್ಮೆಹುಳುಗಳಿಗೆ ತೇವಾಂಶರಹಿತವಾದ ಸೊಪ್ಪು ಕೊಡುವುದು ಸವಾಲಾಗಿ ಪರಿಣಮಿಸಿದೆ” ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

“ಹಿಪ್ಪುನೇರಳೆ ಸೊಪ್ಪಿನಲ್ಲಿ ನೀರು ಇರುವ ಕಾರಣ, ತೋಟಗಳಲ್ಲಿ ನೀರು ಉದುರಿಸಿದ ನಂತರ ಕಟಾವು ಮಾಡಿಕೊಂಡು ಬಂದು ಹುಳುಗಳಿಗೆ ಕೊಡುತ್ತಿದ್ದಾರೆ. ಆದರೂ ಸೊಪ್ಪಿನಲ್ಲಿ ನೀರಿನ ಅಂಶ ಹೆಚ್ಚಾಗಿರುವ ಕಾರಣ, ತೇವಾಂಶವಿರುವ ಸೊಪ್ಪು ತಿನ್ನುವ ಹುಳುಗಳು ಹಣ್ಣಾಗುವ ಹಂತದಲ್ಲಿ ಹಾಲುತೊಂಡೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ರೇಷ್ಮೆ ಬೆಳೆಗೆ ಹಾಕಿರುವ ಬಂಡವಾಳ ಬರುತ್ತದೆಯೊ, ಇಲ್ಲವೋ ಎನ್ನುವ ಆತಂಕ ಕಾಡತೊಡಗಿದೆ” ಎಂಬುದು ರೈತರ ಸಂಕಷ್ಟವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೂರು ಮೊಟ್ಟೆ ರೇಷ್ಮೆ ಹುಳು ಸಾಕಲು 45 ಮೂಟೆ ಹಿಪ್ಪುನೇರಳೆ ಸೊಪ್ಪು ಬೇಕು. ಇದಕ್ಕೆ ₹30 ಸಾವಿರ ಖರ್ಚು ಮಾಡಬೇಕು. ಆದರೆ, ಈಗಿನ ವಾತಾವರಣಕ್ಕೆ ರೇಷ್ಮೆಹುಳು ಗೂಡು ಕಟ್ಟುತ್ತಿಲ್ಲ. ಹುಳು ಹಣ್ಣಾದ ನಂತರ 5ರಿಂದ 6 ದಿನಗಳಿಗೆ ಮಾರುಕಟ್ಟೆಗೆ ಹೋಗಬೇಕು. ಆದರೆ, ಗೂಡುಕಟ್ಟುವುದು ವಿಳಂಬವಾಗುತ್ತಿರುವ ಕಾರಣ, 7ರಿಂದ 8 ದಿನಗಳಾಗುವ ಸಾಧ್ಯತೆ ಇದೆ. ರೇಷ್ಮೆ ಹುಳು ಸಾಕಲು ಹಾಕಿದ ಬಂಡವಾಳ ಕೈಗೆ ಬರುತ್ತಿಲ್ಲ” ಎಂದು ರೈತರು ಅವಲತ್ತುಕೊಂಡಿದ್ದಾರೆ.

“ಎರಡು ದಿನಗಳಿಂದ ಹಣ್ಣಾಗಿರುವ ರೇಷ್ಮೆಹುಳುಗಳು ಸರಿಯಾಗಿ ಗೂಡು ಕಟ್ಟುತ್ತಿಲ್ಲ. ಗೂಡಿನ ಇಳುವರಿಯೂ ಕುಂಠಿತವಾಗುತ್ತಿದೆ. ರೈತರು ಹಣ್ಣಾಗಿರುವ ಹುಳುಗಳನ್ನು ಚಂದ್ರಿಕೆಗಳಿಗೆ ಹಾಕಿ ವಿದ್ಯುತ್ ದೀಪ ಹಚ್ಚಿ ಶೆಡ್‌ಗಳಲ್ಲಿ ಜೋಡಿಸಿಟ್ಟು ಗೂಡುಕಟ್ಟುವಂತೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಮಾರುಕಟ್ಟೆಗೆ ತೆಗೆದುಕೊಂಡು ಹೋದರೂ ಮೋಡದ ವಾತಾವರಣದಲ್ಲಿ ಕಟ್ಟಿರುವ ಗೂಡನ್ನು ತೀರಾ ಕಡಿಮೆ ಬೆಲೆಗೆ ಕೇಳುತ್ತಾರೆ. ಈ ವಾತಾವರಣವೂ ರೇಷ್ಮೆ ಬೆಳೆಗಾರರಿಗೆ ಅನುಕೂಲಕರವಾಗಿಲ್ಲ” ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಭೀಮ ಆರ್ಮಿ ಒತ್ತಾಯ

ಇದೇ ವಾತಾವರಣ ಇನ್ನೂ ಮೂರ್ನಾಲ್ಕು ದಿನ ಮುಂದುವರೆದರೆ ಹುಳುಗಳಲ್ಲಿ ಸುಣ್ಣಕಟ್ಟು ರೋಗವೂ ಕಾಣಿಸಿಕೊಳ್ಳಲಿದೆ. ಈ ರೋಗ ಬಂದ ರೇಷ್ಮೆ ಹುಳುಗಳು ಸೊಪ್ಪು ತಿನ್ನದೆ ಚಟುವಟಿಕೆ ಕಳೆದುಕೊಂಡು ಸಾಯುತ್ತವೆ. ಸತ್ತ ಹುಳುವಿನ ದೇಹವು ಗಟ್ಟಿಯಾಗಿ ಮೈಮೇಲೆ ಬಿಳಿಯ ಪೌಡರ್‌ ರೂಪದಲ್ಲಿ ವೈರಾಣುಗಳು ಉತ್ಪತ್ತಿಯಾಗುತ್ತಿವೆ. ಹೀಗೆ ಉತ್ಪತ್ತಿಯಾದ ವೈರಾಣುಗಳು ಗಾಳಿಯ ಮೂಲಕ ಆರೋಗ್ಯವಂತ ಹುಳುವಿಗೆ ತಾಕುವುದರಿಂದ ಎಲ್ಲ ಹುಳುಗಳು ಸುಣ್ಣಕಟ್ಟು ರೋಗಕ್ಕೆ ತುತ್ತಾಗುತ್ತವೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ದಾವಣಗೆರೆ | ಹೊಸಬರಿಗೆ ಅವಕಾಶ ಕೇಳಿದ್ದರಲ್ಲಿ ತಪ್ಪೇನಿದೆ: ಮಾಜಿ ಸಚಿವ ರೇಣುಕಾಚಾರ್ಯ

ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಾಗ ಹೊಸಮುಖಗಳಿಗೆ...