ರಾಜಧಾನಿ ಬೆಂಗಳೂರಿನ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾರ್ವೇಶ್(19) ಮೃತಪಟ್ಟ ವಿದ್ಯಾರ್ಥಿ. ಇವರು ನಗರದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
ಮಾರ್ವೇಶ್ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ ಎಂದು ತಿಳಿದು ಆತನ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ಹೋಗುವಷ್ಟರಾಗಲೇ ಮಾರ್ವೇಶ್ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಬಳಿಕ ಈ ಬಗ್ಗೆ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಅಸ್ಪತ್ರೆಗೆ ರವಾನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ: ಮುಖ್ಯಮಂತ್ರಿ ಚಂದ್ರು
ಸದ್ಯ ಮೃತ ದೇಹದ ಮೇಲೆ ಯಾವುದೇ ಗುರುತುಗಳು ಪತ್ತೆಯಾಗಿಲ್ಲ. ಮಾರ್ವೇಶ್ ಕಾಲೇಜಿಗೆ ತೆರಳದೆ ಗೆಳೆಯರ ಜೊತೆಗೆ ಬೇರೆ ಕಡೆ ಹೋಗಿದ್ದನು. ಯುವತಿ ವಿಚಾರಕ್ಕೆ ಗೆಳೆಯರ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.