ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಳೆಪೇಟೆ ರಸ್ತೆಯ ರಾಜ್‌ಕುಮಾರ್ ಪ್ರತಿಮೆ ಬಳಿ ನಡೆದಿದೆ.
ಬುಧವಾರ ರಾತ್ರಿ ಈ ಕೃತ್ಯ ನಡೆದಿದ್ದು, ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಸುರೇಶ್ ಹತ್ಯೆಯಾದ ಆಟೋ ಚಾಲಕ.
ಹತ್ಯೆಯಾದ ಸುರೇಶ್ ಮೂಲತಃ ತುಮಕೂರು ಜಿಲ್ಲೆಯ ಹುಲಿಯೂರುದುರ್ಗದವರು. ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಜೀವನ ನಡೆಸಲು ಆಟೋ ಓಡಿಸುತ್ತಿದ್ದರು.
ಬುಧವಾರ ಗೆಳೆಯರ ಜತೆಗೆ ಗುಂಡು ಪಾರ್ಟಿ ಮಾಡುತ್ತಿದ್ದಾಗ, ಕ್ಲುಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಕುಡಿದ ಅಮಲಿನಲ್ಲಿದ್ದ ಆತನ ಸ್ನೇಹಿತರು ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.