- ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು
- ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು
ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಯುವಕನಿಂದ ರಕ್ಷಣೆ ಹಾಗೂ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾಳೆ.
ದೂರು ನೀಡಿರುವ ಯುವತಿ ಮಹಾರಾಷ್ಟ್ರ ಮೂಲದವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲೆಸಿದ್ದರು. ಬ್ಲಾಕ್ ಬೆರಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಯುವಕ ಅಲ್ ಮೆಹಪ್ಯೂಸ್ ಬರಪೂಯಾ ಅಸ್ಸಾಂ ಮೂಲದವನಾಗಿದ್ದು, ಗಾರ್ಮೆಂಟ್ಸ್ ರಿಟೇಲ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ ಕೊರಮಂಗಲದಲ್ಲಿ ನೆಲೆಸಿದ್ದಾರೆ.
ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ಪ್ರಾರಂಭದಲ್ಲಿ ಯುವಕ ತನ್ನ ಹೆಸರು ಮೆಲ್ಬಿನ್, ತಾನೂ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದ. ಆಕಸ್ಮಿಕವಾಗಿ ಅಲ್ ಮೆಹಪ್ಯೂಸ್ನ ಆಧಾರ್ ಕಾರ್ಡ್ ಯುವತಿಯ ಕಣ್ಣಿಗೆ ಬಿದ್ದಿದ್ದು, ಆತ ಕ್ರಿಶ್ಚಿಯನ್ ಅಲ್ಲ, ಮುಸ್ಲಿಂ ಎಂದು ಆಕೆಗೆ ಗೊತ್ತಾಗಿದೆ. ಯುವಕನ ಮೋಸದ ಬಗ್ಗೆ ತಿಳಿದು ಯುವತಿ ಆತನಿಂದ ದೂರವಾಗಿದ್ದಾಳೆ.
ಬಳಿಕ ಯುವಕ ಅಲ್ ಮೆಹಪ್ಯೂಸ್ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದು, ರಾತ್ರಿ ವೇಳೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿದ್ದಾನೆ. ಯುವತಿ ಸೇರಿದಂತೆ ಕುಟುಂಬದವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಯುವತಿ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರಿಗೆ ಬಳಿ ಹೋಗಿ, ಆಕೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾನೆ. “ಆತನೊಂದಿಗೆ ತನ್ನ ಸಹೋದ್ಯೋಗಿಗಳು ಸೇರಿಕೊಂಡಿದ್ದಾರೆ” ಎಂದು ಯುವತಿ ದೂರಿದ್ದಾರೆ.
ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಟೀಮ್ ಮಹಮದ್ ಸಕ್ಕೈನ್, ಸೈಯ್ಯದ್, ಮುಜಿಬ್ ಸೈಫ್ ಶೇಖ್, ಅಸ್ಲಂ ತಬ್ರೆಜ್ ಇವರೆಲ್ಲರು ಸೇರಿ ತನ್ನ ವೃತ್ತಿ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ನಿಗಮ
ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಕಂಪನಿಯ ಜಿಎಂ ಸಾಯಾಕ್ ಅರೋರಾ ಯುವತಿಗೆ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ನಾಲ್ಕು ಲಕ್ಷ ನೀಡಿ ಸ೦ಧಾನ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಈಗಾಗಲೇ, ಟೈಪ್ ಮಾಡಿದ್ದ ಪ್ರತಿಯನ್ನು ಮುಂದಿಟ್ಟು ಸಹಿ ಹಾಕುವಂತೆ ಒತ್ತಡ ಹೇರಿದ್ದಾರೆ. ಹಣ ನೀಡದಿದ್ದರೆ ಕೆಲಸದಿಂದ ತೆಗೆಯುವುದಾಗಿ ಹೆಚ್ಆರ್ ಅಂಕುಷ್ ಠಾಕೂರ್, ಎಂಐಎಸ್ ಅವಿನಾಶ್ ವರ್ಮ, ಜಿಎಂ ಸಯಾಕ್ ಆರೋರಾ, ಪ್ರಾಂಚೈಸಿ ಹರೀಶ್ ಎಂಬವರು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.
ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.