ಬೆಂಗಳೂರು | ಮತ್ತೊಂದು ರಸ್ತೆಯಲ್ಲಿ ಟೋಲ್‌ ವಸೂಲಿ ಆರಂಭ; ದರ ಪಟ್ಟಿ ಇಲ್ಲಿದೆ!

Date:

ಬೆಂಗಳೂರು ಬಳಿಯ ದಾಬಸ್‌ಪೇಟೆಯಿಂದ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ದೊಡ್ಡಬಳ್ಳಾಪುರ ಬಳಿ ನಡೆಯುತ್ತಿದ್ದ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ನವೆಂಬರ್ 17ರಿಂದ ದೊಡ್ಡಬಳ್ಳಾಪುರ ಮತ್ತು ನಲ್ಲೂರು ನಡುವಿನ 34.15 ಕಿ.ಮೀ ರಸ್ತೆಗೆ ಹೊಸದಾಗಿ ಟೋಲ್‌ ಸುಂಕ ವಸೂಲಿ ಆರಂಭಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಟೋಲ್‌ ಸುಂಕದ ದರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

- Advertisement -

ಉತ್ತರ ಕರ್ನಾಟಕ, ಮಧ್ಯ ಕರ್ನಾಟಕದಿಂದ ತಮಿಳುನಾಡಿನ ಹೊಸೂರು ಭಾಗಕ್ಕೆ ತೆರಳುವವರು ಬೆಂಗಳೂರು ನಗರವನ್ನು ಪ್ರವೇಶಿಸದೆ ದಾಬಸ್‌ಪೇಟೆಯಿಂದ ನೇರವಾಗಿ ಹೊಸೂರಿಗೆ ತೆರಳಲು ಈ ಹೆದ್ದಾರಿ ಅವಕಾಶ ಮಾಡಿಕೊಡಲಿದೆ ಎಂದು ಹೇಳಲಾಗಿದೆ. ದಾಬಸ್‌ಪೇಟೆ-ಹೊಸೂರು ಹೆದ್ದಾರಿಯು ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮಾರ್ಗವಾಗಿ ಹೊಸೂರನ್ನು ತಲುಪಲಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು, ದೊಡ್ಡಬಳ್ಳಾಪುರ ಬೈಪಾಸ್‌ನಿಂದ ನಲ್ಲೂರು ಗ್ರಾಮದ ವರೆಗಿನ ರಸ್ತೆ ಪೂರ್ಣಗೊಂಡಿದೆ. ಹೀಗಾಗಿ, ಈ ರಸ್ತೆಗೆ ಟೋಲ್ ಸುಂಕ ವಸೂಲಿಗೆ ಪ್ರಾಧಿಕಾರ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅದಕ್ಕಾಗಿ, ಪ್ರಾಧಿಕಾರ ಟೋಲ್‌ ದರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ದರಪಟ್ಟಿಯು 2024ರ ಮಾರ್ಚ್‌ 31ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಾಧಿಕಾರ ಹೇಳಿದೆ. ದರ ಪಟ್ಟಿ ಹೀಗಿದೆ.

ದರಪಟ್ಟಿ1 1 1 1 1 1

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...