ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಎಲ್ಲೆಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ನೋಡಿ

Date:

Advertisements

ಆಗಸ್ಟ್‌ 26ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆ, ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸದ್ಯ ಪ್ರಧಾನಮಂತ್ರಿ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್​​​ಬರ್ಗ್​​ನಲ್ಲಿ ಬ್ರಿಕ್ಸ್​ ಶೃಂಗಸಭೆಯ ನಂತರ ಅವರು ಗ್ರೀಸ್ ದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಶನಿವಾರ ಬೆಳಗ್ಗೆ ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಅವರು ಬಂದಿಳಿಯಲಿದ್ದಾರೆ. ಈ ಹಿನ್ನೆಲೆ ಶನಿವಾರ ಬೆಳಗ್ಗೆ 4:30 ರಿಂದ ಬೆಳಗ್ಗೆ 9:30ರ ವರೆಗೆ ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆಯಾಗಿದೆ.

Advertisements

ರಸ್ತೆ ಮಾರ್ಗ ಬದಲಾವಣೆ ಎಲ್ಲೆಲ್ಲಿ?

  • ಹಳೆಯ ಏರ್‌ಪೋರ್ಟ್ ರಸ್ತೆ
  • ಹಳೆಯ ಮದ್ರಾಸ್ ರಸ್ತೆ
  • ಎಂ.ಜಿ.ರಸ್ತೆ
  • ಕಬ್ಬನ್ ರಸ್ತೆ
  • ರಾಜಭವನ ರಸ್ತೆ
  • ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್)
  • ಸಿವಿ ರಾಮನ್ ರಸ್ತೆ
  • ಯಶವಂತಪುರ ಫ್ಲೈ ಓವರ್
  • ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ)
  • ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ)
  • ಗುಬ್ಬಿ ತೋಟದಪ್ಪ ರಸ್ತೆ
  • ಜಾಲಹಳ್ಳಿ ಕ್ರಾಸ್‌ ರಸ್ತೆ

ಇನ್ನು ಆಗಸ್ಟ್ 26ರ ಬೆಳಗಿನ ಜಾವ 4 ಗಂಟೆಯಿಂದ ಬೆಳಗ್ಗೆ 11 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೋ ಸಾಧನೆ ಐತಿಹಾಸಿಕವಾದದ್ದು : ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ

ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಬೆಂಗಳೂರು ಸಂಚಾರ ಪೋಲಿಸರು ಮನವಿ ಮಾಡಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರು ಪೀಣ್ಯದಲ್ಲಿ ಸುಮಾರು 1 ಕಿಲೋಮೀಟರ್ ರೋಡ್​ಶೋ ನಡೆಸುವ ಸಾಧ್ಯತೆಯಿದೆ. ಮೋದಿ ಅವರ ಸ್ವಾಗತಕ್ಕೆ ಎಚ್​ಎಎಲ್​​ ಏರ್​ಪೋರ್ಟ್​ನಲ್ಲಿ 5 ರಿಂದ 6 ಸಾವಿರ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X