ಬೆಂಗಳೂರು ವಿಶ್ವವಿದ್ಯಾಲಯ | ‘ನ್ಯಾಕ್ ಎ ಡಬಲ್ ಪ್ಲಸ್’ ಪಡೆದಿದ್ದರೂ ವಿದ್ಯಾರ್ಥಿಗಳಿಗಿಲ್ಲ ಮೂಲ ಸೌಕರ್ಯ

Date:

Advertisements
  • ಇನ್ನು 15 ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದ ಬೆಂವಿವಿ ಕುಲಪತಿ
  • ವಿಶ್ವವಿದ್ಯಾಲಯದ ಸುಮಾರು 52 ವಿಭಾಗದ 3 ಸಾವಿರ ವಿದ್ಯಾರ್ಥಿಗಳು ತರಗತಿಗೆ ಗೈರು

ಬೆಂಗಳೂರು ವಿಶ್ವವಿದ್ಯಾಲಯ ‘ನ್ಯಾಕ್ ಎ ಡಬಲ್ ಪ್ಲಸ್’ ಪಡೆದಿದ್ದರೂ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ಮೂಲ ಸೌಕರ್ಯಗಳನ್ನು ಒದಗಿಸದೇ, ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುವ ಹಾಗೂ ವಿದ್ಯಾರ್ಥಿ ಸಮೂಹವನ್ನು ದುರ್ಬಳಕೆ ಮಾಡಿಕೊಳ್ಳುತ್ತಾ ಮೋಸ ಮಾಡುತ್ತಿದೆ ಎಂದು ಬೆಂವಿವಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂಲ ಸೌಕರ್ಯಗಳ ಜತೆಗೆ ಇನ್ನೂ ಹಲವಾರು ಸೌಕರ್ಯಗಳನ್ನು ಒದಗಿಸುವ ಪ್ರಯತ್ನ ಮಾಡದೇ, ಆಡಳಿತಾಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಬೆಂವಿವಿಯ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿಗಳು ಜುಲೈ 11ರಂದು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸುಮಾರು 52 ವಿಭಾಗದ 3 ಸಾವಿರ ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಹಾಜರಾಗಿದ್ದರು.

Advertisements

ವಿದ್ಯಾರ್ಥಿಗಳ ಬೇಡಿಕೆಗಳೇನು?  

ಗ್ರಂಥಾಲಯದಲ್ಲಿ ಪುಸ್ತಕ, ಉತ್ತಮ ಹಾಸ್ಟೆಲ್ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ಸ್ಕಿಲ್ ಡೆವಲಪ್‌ಮೆಂಟ್ ಕ್ಲಾಸ್, ಉತ್ತಮ ಲ್ಯಾಬ್, ಸ್ವಿಮ್ಮಿಂಗ್ ಪೂಲ್ ದುರಸ್ತಿ, ಗುಣಮಟ್ಟದ ಶೌಚಾಲಯಗಳು, ಇಂಟರ್ನೆಟ್ ಅನುಕೂಲ, ಸ್ಪೋಕನ್ ಇಂಗ್ಲಿಷ್ ತರಗತಿಗಳು, ಕಂಪ್ಯೂಟರ್‌ ಕ್ಲಾಸ್‌, 24×7 ಗ್ರಂಥಾಲಯಗಳು, ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಸೆಂಟರ್, ಉತ್ತಮ ಕ್ಯಾಂಟೀನ್ ವ್ಯವಸ್ಥೆ, ಸ್ಮಾರ್ಟ್‌ ಬೋರ್ಡ್‌, ಉತ್ತಮ ಲ್ಯಾಬ್ ಮತ್ತು ಉಪಕರಣಗಳು, ಕುಡಿಯಲು ಶುದ್ಧ ನೀರಿನ ವ್ಯವಸ್ಥೆ, ಸುಸಜ್ಜಿತ ಹೊರ ಕ್ರೀಡಾಂಗಣ ಹಾಗೂ ಒಳ ಕ್ರೀಡಾಂಗಣ ವ್ಯವಸ್ಥೆ ಮತ್ತು ಕ್ರೀಡಾ ಉಪಕರಣಗಳು ಉತ್ತಮ ದೈಹಿಕ ವ್ಯಾಯಾಮ ಶಾಲೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಿಲಕನಗರದ ಎಂ.ಎಸ್ ಕಟ್ಟಡದ ದುರಸ್ಥಿ ಕಾಮಗಾರಿಗೆ ಸೂಚನೆ

“ಎಲ್ಲ ವಿದ್ಯಾರ್ಥಿಗಳಿಗೆ ಲಾಪ್‌ಟಾಪ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಇನ್ನು ಮೂರು ದಿನದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ನೀಡಲಾಗುವುದು ಹಾಗೂ ಇನ್ನೂ ಹದಿನೈದು ದಿನದೊಳಗೆ ವಿವಿಯಲ್ಲಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ಕುಲಪತಿ ಭರವಸೆ ನೀಡಿದ್ದಾರೆ” ಎಂದು ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ಅವರು ಈ ದಿನ.ಕಾಮ್‌ಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X