ಬೆಂಗಳೂರು | ಮಂಗಳವಾರ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಪ್ರಯಾಣಿಕರ ಪರದಾಟ

Date:

Advertisements
  • ಬಿಎಂಆರ್‌ಸಿಎಲ್‌ನ ತಾಂತ್ರಿಕ ದೋಷಕ್ಕೆ ಜನರಿಂದ ದುಡ್ಡು ವಸೂಲಿ
  • ತಾಂತ್ರಿಕ ಸಮಸ್ಯೆಗಳಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವಿಳಂಬ

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮೆಟ್ರೋ ಸಂಚಾರ ವ್ಯತ್ಯಯವಾಗಿದ್ದು, ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಶಾಲೆ-ಕಾಲೇಜು, ಕಚೇರಿ ಕೆಲಸಕ್ಕೆ ತೆರಳುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಕೆಂಗೇರಿ-ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಹೆಚ್ಚು ಜನ ಸಂಚರಿಸುವ ಅವಧಿಯಲ್ಲಿ ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಇನ್ನೂ ಈ ಬಗ್ಗೆ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದು, “ಬೆಳಿಗ್ಗೆಯಿಂದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಹೀಗಾಗಿ, ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ತಾಂತ್ರಿಕ ದೋಷದಿಂದ ರೈಲುಗಳು ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಜನರು ನಿಲ್ದಾಣದಿಂದ ವಾಪಾಸ ಬಂದ ದಾರಿಗೆ ಹಿಂತಿರುಗುವ ವೇಳೆ ಪ್ರತಿಯೊಬ್ಬರಿಂದಲೂ ₹9.50 ಕಟ್ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್)ದ ತಾಂತ್ರಿಕ ದೋಷಕ್ಕೆ ಜನರಿಂದ ದುಡ್ಡು ವಸೂಲಿ ಮಾಡಲಾಗುತ್ತಿದೆ” ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

“ತಾಂತ್ರಿಕ ಸಮಸ್ಯೆಗಳಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವಿಳಂಬವಾಗಿದೆ. ಸಮಸ್ಯೆಯನ್ನು ಬಗೆಹರಿಸಲು ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ” ಎಂದು ಬಿಎಂಆರ್‌ಸಿಎಲ್‌ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X