‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ), “ಸೆಪ್ಟೆಂಬರ್ 6ರಂದು(ಬುಧವಾರ) ‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.