ಬಿಬಿಎಂಪಿ | ಶಾಲಾ-ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳು, ದೇವಾಲಯಗಳ ಟ್ರಸ್ಟ್‌ಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಬಳಕೆಯ ನಿಷೇಧದ ಬಗ್ಗೆ ಪಾಲಿಕೆ ಆದೇಶ ಹೊರಡಿಸಿದೆ.

ಶಾಲೆಗಳು/ಕಾಲೇಜುಗಳು/ದೇವಾಲಯಗಳಿಗೆ ನಿರ್ದೇಶನ

ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ಶಾಲಾ-ಕಾಲೇಜು ಹಾಗೂ ದೇವಾಲಯ ಆವರಣದೊಳಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಬೇಕು. ಈ ನಿಷೇಧದ ಬಗ್ಗೆ ಆವರಣದೊಳಗೆ ನಿರ್ದೇಶನ ನೀಡುವ ಫಲಕ ಸ್ಥಾಪಿಸಬೇಕು.

Advertisements

ಸೂಕ್ತ ನಿರ್ವಹಣಾ ತಂತ್ರಗಳನ್ನು ವಿನ್ಯಾಸಗೊಳಿಸುವ ಮೂಲಕ ಏಕಬಳಕೆ ಪ್ಲಾಸ್ಟಿಕ್ ಗಳ ಬಳಕೆಯನ್ನು ಹಂತಹಂತವಾಗಿ ನಿಯಂತ್ರಿಸಿ ನಿರ್ಮೂಲನೆ ಮಾಡಬೇಕು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2016ನ್ನು ತಿದ್ದುಪಡಿಗೊಳಿಸಲಾಗಿದೆ. ಗುರುತಿಸಲಾದ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮೇಲೆ ವಿಧಿಸಲಾದ ನಿರ್ದಿಷ್ಟ ನಿಷೇಧಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು.

ಏಕಬಳಕೆ ಪ್ಲಾಸ್ಟಿಕ್ ಬದಲಾಗಿ ಪರ್ಯಾಯ ವಸ್ತುಗಳ ಅಳವಡಿಕೆಯ ಬಗ್ಗೆ (ಬಟ್ಟೆ ಅಥವಾ ಕಾಗದದಿಂದ ಮಾಡಲ್ಪಟ್ಟ ಅಥವಾ ಕಾಲ-ಕಾಲಕ್ಕೆ ಸೂಚಿಸಿದಂತೆ) ಮತ್ತು ನಿಷೇಧಿತ ವಸ್ತುಗಳ ಬಗ್ಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿದ ಸಲಹಾ ಕೈಪಿಡಿಯನ್ನು ಸೃಷ್ಟಿಕರಣಕ್ಕಾಗಿ ಬಳಸಬಹುದು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಕೋರಿದ್ದ ಪಿಐಎಲ್‌ ವಜಾ

ಎಲ್ಲ ಶಾಲೆಗಳ ಮತ್ತು ಕಾಲೇಜುಗಳ ಹಾಗೂ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣಾ ನಿಯಮಗಳು-2016ನ್ನು (ತಿದ್ದುಪಡಿ) ಮತ್ತು ಏಕಬಳಕೆ ಪ್ಲಾಸ್ಟಿಕ್‌ ನಿಷೇಧದ ಆದೇಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಬೇಕು.

ನಿಯಮಗಳನ್ನು ಪಾಲಿಸಲು ವಿಫಲವಾದರೆ ಘನತ್ಯಾಜ್ಯ ನಿರ್ವಹಣಾ ಬೈ-ಲಾಸ್‌ ಪ್ರಕಾರ ದಂಡವನ್ನು ವಿಧಿಸಲಾಗುವುದು. ಪಾಲಿಕೆಯಿಂದ ಹೊರಡಿಸಲಾದ ನಾನಾ ಆದೇಶಗಳ/ನಿಬಂಧನೆಗಳ ಉಲ್ಲಂಘನೆಯು ದಂಡದ ಷರತ್ತು ಮತ್ತು ಕ್ರಮವನ್ನು ಸೂಕ್ತವೆಂದು ಪರಿಗಣಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಮತ್ತು ಏಕಬಳಕ ಪ್ಲಾಸ್ಟಿಕ್ ಬಳಸುವ ಪರಂಪರೆಯ ಅಭ್ಯಾಸವನ್ನು ತೊಡೆದುಹಾಕಲು ನಿರಂತರ ಪ್ರಯತ್ನಗಳನ್ನು ಮಾಡುವುದು. ವಿದ್ಯಾರ್ಥಿಗಳಲ್ಲಿ “ಏಕಬಳಕ ಪ್ಲಾಸ್ಟಿಕ್ ತಪ್ಪಿಸಿ/ತ್ಯಜಿಸಿ” ಎಂಬ ವಿಷಯದ ಮೇಲೆ ಸ್ಪರ್ಧೆಗಳನ್ನು ನಿಯಮಿತವಾಗಿ ಕೈಗೊಳ್ಳಬೇಕು ಎಂದು ಪಾಲಿಕೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X