ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ಮಹದೇವ ಈ ಬಗ್ಗೆ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಒಟ್ಟು 57 ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸದ್ಯ ಪೊಲೀಸರು 22 ಗುತ್ತಿಗೆದಾರರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ದೂರಿನ ಸಂಬಂಧ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೈಗ್ರೌಂಡ್ ಠಾಣೆಯ ಪೊಲೀಸರು ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಅಧಿಕಾರ ಲೋಕಾಯುಕ್ತ ಬಲೆಗೆ
ಬಾಕಿ ಬಿಲ್ ಪಾವತಿಸುವಂತೆ ಬಿಬಿಎಂಪಿ ಅಧಿಕಾರಿಗೆ ಗುತ್ತಿಗೆದಾರರು ಒತ್ತಡ ಹಾಕುತ್ತಿದ್ದರು. ಪಾವತಿ ಮಾಡದಿದ್ದರೆ, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ದೂರಿನಲ್ಲಿ ಆರೋಪಿಸಿದ್ದಾರೆ.