ಬಿಬಿಎಂಪಿ ಅಗ್ನಿ ಅವಘಡ | 20 ಸಾವಿರ ಕೋಟಿ ಹಗರಣದ ದಾಖಲೆಗಳನ್ನು ನಾಶಪಡಿಸುವ ಯತ್ನ: ಎಎಪಿ ಶಂಕೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪೂರ್ವಯೋಜಿತ ಕೃತ್ಯವೆಂದು ಎಎಪಿ ಶಂಕೆ ವ್ಯಕ್ತಪಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಸ್ಥಳ ಪರಿಶೀಲನೆ ನಡೆಸಿದೆ. ಕೋಟ್ಯಂತರ ವ್ಯವಹಾರಗಳ ದಾಖಲೆಗಳನ್ನು ಸಂಗ್ರಹಿಸಿಡಲಾದ ಕೊಠಡಿಗೂ ಬೆಂಕಿ ತಗುಲಿರುವ ಸಾಧ್ಯತೆಯ ಹಿನ್ನೆಲೆ ಈ ಕುರಿತು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದೆ. 

“ನಗರೋತ್ಥಾನ ಯೋಜನೆಯಡಿ ₹20,000 ಕೋಟಿ ಖರ್ಚು ಮಾಡಲಾಗಿದೆ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಿದ್ದರು. ಈ ಯೋಜನೆಯಡಿ ಭ್ರಷ್ಟಾಚಾರ ನಡೆದಿದೆ ಎನ್ನುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲ ತರದ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ತನಿಖೆ ಎಂದರೆ ಸಂಬಂಧಪಟ್ಟ ದಾಖಲೆಗಳಿರುವ ರೆಕಾರ್ಡ್ ರೂಂ ಸುಟ್ಟುಹೋಗುವಂತೆ ಮಾಡುವುದೆ?” ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಪ್ರಶ್ನಿಸಿದರು.

Advertisements

“ಅವಘಡ ಸಂಭವಿಸಿದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೋಹನ್ ದಾಸರಿ, ಬಿಬಿಎಂಪಿ ಮುಖ್ಯ ಕಚೇರಿಯಂತಹ ಪ್ರಮುಖ ಸ್ಥಳದಲ್ಲಿ ಪ್ರಾಥಮಿಕ ಆದ್ಯತೆಯಾಗಿರುವ ಅಗ್ನಿ ಸುರಕ್ಷತೆಯೇ ಇಲ್ಲವೆಂದರೆ, ಗಾಯಗೊಂಡವರನ್ನು ಆ್ಯಂಬುಲೆನ್ಸ್ ವ್ಯವಸ್ಥೆಯಿಲ್ಲದೆ ಹೊಯ್ಸಳ ವಾಹನದಲ್ಲಿ ಕರೆದೊಯ್ದಿದ್ದಾರೆಂದರೆ ಏನು ಅರ್ಥ? ಇದನ್ನೆಲ್ಲ ಗಮನಿಸಿದರೆ ಕೋಟ್ಯಂತರ ಮೌಲ್ಯದ ದಾಖಲೆಗಳನ್ನು ನಾಶ ಮಾಡುವುದಕ್ಕಾಗಿ ನಡೆಸಿರುವ ಪೂರ್ವಯೋಜಿತ ಕೃತ್ಯವೆಂದು ಕಂಡುಬರುತ್ತಿದೆ. ಈ ಬಗ್ಗೆ ದೊಡ್ಡ ಮಟ್ಟದ ತನಿಖೆಯಾಗಬೇಕು. ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

“ಇದು ಆಕಸ್ಮಿಕವಾಗಿ ನಡೆದ ಅವಘಡವಲ್ಲ ಎಂಬುದು ಕಂಡುಬರುತ್ತಿದೆ. ಈಗಾಗಲೇ ಗುತ್ತಿಗೆದಾರರು ತಮ್ಮ ಹಣವನ್ನು ಕೊಡಿ ಎಂದು ಕೇಳುತ್ತಿದ್ದಾರೆ. ಬಿಬಿಎಂಪಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವ ಆರೋಪಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಕೋಟ್ಯಂತರ ವ್ಯವಹಾರಗಳ ದಾಖಲೆಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಯಿರುವ ಕಟ್ಟಡದಲ್ಲೇ ಅಗ್ನಿ ಅನಾಹುತವಾಗುತ್ತದೆ ಎಂದರೆ ಏನರ್ಥ? ಯಾರೋ ಈ ಕೃತ್ಯವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಎಲ್ಲ ಹಗರಣಗಳ ದಾಖಲೆಗಳು ಸಿಗದಂತೆ ಮಾಡುವ ಹುನ್ನಾರ ನಡೆದಿದೆ ಎಂಬುದು ಮೊದಲ ಹಂತದ ಪರಿಶೀಲನೆಯಲ್ಲೇ ಕಂಡುಬರುತ್ತಿದೆ. ದಾಖಲೆ ನಾಶಪಡಿಸುವ ಯತ್ನ ಬಿಬಿಎಂಪಿ ಕಚೇರಿಯಲ್ಲಿ ಹೊಸದೇನಲ್ಲ. ಈ ಹಿಂದೆ ಇದೇ ರೀತಿ ₹2000 ಕೋಟಿ ಹಗರಣದ ದಾಖಲೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದ ಉದಾಹರಣೆಯಿದೆ” ಎಂದು ಮೋಹನ್ ದಾಸರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ: ಬಿಬಿಪಿವಿ ಶಾಹೀನ್ ಶಾಸಾ

ಶುಕ್ರವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಂಡದಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಮಾಧ್ಯಮ ವಕ್ತಾರೆ ಉಷಾ ಮೋಹನ್, ಮುಖಂಡರಾದ ಜಗದೀಶ್ ಬಾಬು, ವಿಶ್ವನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X