ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಶಕ್ಕೆ ಪಡೆದ ಮೂವರು ಡಿ ಗ್ರೂಪ್ ನೌಕರರಾಗಿದ್ದಾರೆ. ಲ್ಯಾಬ್ನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ವಶಕ್ಕೆ ಪಡೆದ ಮೂವರು ಸ್ಥಳದಲ್ಲೇ ಇದ್ದರು. ಅವಘಡ ನಡೆದಾಗ ಮೊದಲಿಗೆ ಆಚೆಗೆ ಓಡಿ ಬಂದಿದ್ದಾರೆ. ಸದ್ಯ ಡಿ ಗ್ರೂಪ್ ನೌಕರರು ಗುಣನಿಯಂತ್ರಣ ಪ್ರಯೋಗಾಲಯಕ್ಕೆ ಹೋಗಿದ್ದೇಕೆ ಎಂಬ ಪ್ರಶ್ನೆ ಮೂಡಿದೆ.
ಇಬ್ಬರು ಎಂಜಿನಿಯರ್ ಹಾಗೂ ಒಬ್ಬ ಗುಮಾಸ್ತನನ್ನು ವಶಕ್ಕೆ ಪಡೆದಿರುವ ಪೊಲೀಸರು ಶುಕ್ರವಾರ ತಡರಾತ್ರಿಯವರೆಗೂ ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ಮೂವರು ನೌಕರರು ಘಟನಾ ಸ್ಥಳದಲ್ಲಿ ಇದ್ದರೂ ಗಾಯಗೊಂಡಿಲ್ಲ. ಹಾಗಾಗಿ, ಇವರ ಮೇಲೆ ಅನುಮಾನಗೊಂಡ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | 20 ಸಾವಿರ ಕೋಟಿ ಹಗರಣದ ದಾಖಲೆಗಳನ್ನು ನಾಶಪಡಿಸುವ ಯತ್ನ: ಎಎಪಿ ಶಂಕೆ
ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಬೆಂಕಿ ಅವಘಡದ ತನಿಖೆಗೆ ಆದೇಶಿಸಲಾಗಿದೆ. ಪ್ರಯೋಗಾಲಯಗಳನ್ನು ಮುಕ್ತ ಜಾಗದಲ್ಲಿ ಇಡಬೇಕು. ಆದರೆ, ಈಗ ಇಟ್ಟಿರುವ ಜಾಗ ಸರಿ ಇಲ್ಲ. ಅವಘಡದಲ್ಲಿ ಒಟ್ಟು ಒಂಬತ್ತು ಜನ ಗಾಯಗೊಂಡಿದ್ದಾರೆ. ಅವಘಡದಲ್ಲಿ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯಾದ ಬಳಿಕ ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.