ಬಿಬಿಎಂಪಿ | ಅಕ್ರಮ ‘ಎ’ ಖಾತಾ ಪ್ರಮಾಣಪತ್ರ ನೀಡುತ್ತಿರುವ ಕುರಿತು ತನಿಖೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಅಕ್ರಮ ‘ಎ’ ಖಾತಾ ಪ್ರಮಾಣಪತ್ರ ನೀಡುತ್ತಿರುವ ಕುರಿತು ತನಿಖೆ ನಡೆಸಲಿದೆ.

ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಅಕ್ರಮವಾಗಿ ‘ಬಿ’ ಖಾತಾಗಳನ್ನು ‘ಎ’ ಖಾತಾಗಳಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಆದೇಶದ ಪ್ರಕಾರ, ಹಣಕಾಸು ವಿಶೇಷ ಆಯುಕ್ತರ ಆದೇಶದ ನಂತರ 3,666 ಅಕ್ರಮ ‘ಎ’ ಖಾತಾಗಳನ್ನು ‘ಬಿ’ ಖಾತಾಗಳಾಗಿ ಮರುಪರಿವರ್ತಿಸಬೇಕು ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಕ್ರಮ ‘ಎ’ ಖಾತಾಗಳಿಗೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿದ್ದು, ಅಂತಹ ಸುಮಾರು 45,000 ಆಸ್ತಿಗಳನ್ನು ‘ಬಿ’ ಖಾತಾದಿಂದ ‘ಎ’ ಖಾತಾಗೆ ಪರಿವರ್ತಿಸಲಾಗಿದೆ ಎಂದು ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಅಂತಹ ಶೇಕಡಾ 90ಕ್ಕೂ ಹೆಚ್ಚು ಆಸ್ತಿಗಳನ್ನು ಅಕ್ರಮವಾಗಿ ಪರಿವರ್ತಿಸಲಾಗಿದೆ. ಬೆಂಗಳೂರಿನಾದ್ಯಂತ ಅಂತಹ ಎಲ್ಲ ಆಸ್ತಿಗಳನ್ನು ಮರುಪರಿಶೀಲಿಸುವಂತೆ ಆದೇಶಿಸಲಾಗಿದೆ. ಪಾಲಿಕೆ ಕಂದಾಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಹೊಸ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್

“ಎಲ್ಲ ವಾರ್ಡ್‌ಗಳು ‘ಬಿ’ ಆಸ್ತಿಗಳಿಗೆ ‘ಎ’ ಖಾತಾ ನೀಡಿರುವುದರಿಂದ ಆರ್‌ಆರ್ ನಗರ ವಲಯದಿಂದ ಚಾಲನೆ ಪ್ರಾರಂಭವಾಗಿದೆ. ವಿಶೇಷ ಆಯುಕ್ತರ ಆದೇಶದ ಪ್ರಕಾರ, ಎಲ್ಲ 3,666 ‘ಎ’ ಖಾತಾಗಳನ್ನು ‘ಬಿ’ ಖಾತಾಗೆ ಮರುಪರಿವರ್ತಿಸಲಾಗುವುದು” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಇತ್ತೀಚೆಗೆ ಪಾಲಿಕೆ ಅಧಿಕಾರಿಗಳು ಅಂಜನಾಪುರದ ಬಿಬಿಎಂಪಿಯ ಕಂದಾಯ ಉಪ ಇಲಾಖೆಗೆ ಭೇಟಿ ನೀಡಿ ಅಕ್ರಮ ‘ಎ’ ಖಾತಾ ನೀಡಿರುವ ಎರಡು ವಾರ್ಡ್‌ಗಳ ದಾಖಲೆಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಕೇವಲ ಎರಡು ವಾರ್ಡ್‌ಗಳಲ್ಲಿ 698 ಅಕ್ರಮ ‘ಎ’ ಖಾತಾ ನೀಡಲಾಗಿದೆ” ಎಂದು ತಿಳಿದು ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿದ್ದ ಬೆಂಗಳೂರು ಎಸ್ಐ ಈಗ ಐಎಎಸ್ ಅಧಿಕಾರಿ

ತಮ್ಮ ಸರ್ಕಾರಿ ವೃತ್ತಿಯ ಜೊತೆ ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು | ಡಾ. ಸುನಿಲ್ ಕುಮಾರ್ ಹೆಬ್ಬಿ ಮೇಲೆ ಮಾರಣಾಂತಿಕ ಹಲ್ಲೆ; ಪೊಲೀಸ್ ರಕ್ಷಣೆಗೆ ಆಗ್ರಹ

ಯಲಹಂಕದ ಕೇಂದ್ರೀಯ ವಿಹಾರ ಬಹು ಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ವಾಸ ಮಾಡುತ್ತಿರುವ...

ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ...

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...