- ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ
- ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಬಾಕಿ
ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ₹7 ಸಾವಿರ ಕೋಟಿ ಅನುದಾನ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ.
“ರಾಜಧಾನಿ ಬೆಂಗಳೂರಿನಲ್ಲಿ ಅಮೃತ ನಗರೋತ್ಥಾನ, ವೈಟ್‌ಟಾಪಿಂಗ್ ಸೇರಿದಂತೆ ಹಲವು ಯೋಜನೆಗಳಲ್ಲಿ ಕ್ರಿಯಾ ಯೋಜನೆಯಾಗಿ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ನಡೆದ ಯೋಜನೆಗಳ ಬಿಲ್ ಇನ್ನೂ ಕೆಲವೇ ದಿನಗಳಲ್ಲಿ ಬರಲಿವೆ. ಹಾಗಾಗಿ, ಬಿಲ್ ಪಾವತಿ ಮಾಡಲು ಬಜೆಟ್‌ನಲ್ಲಿ ₹7 ಸಾವಿರ ಕೋಟಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು” ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ
“ಈ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಅನುದಾನದಲ್ಲಿ ನಗರದಲ್ಲಿ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈಗ ಮುಗಿಯುತ್ತಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಮಾಡಬೇಕು. ಹಾಗಾಗಿ, ಮೊತ್ತವನ್ನು ಬಿಡುಗಡೆ ಮಾಡಲು ಮನವಿ ಮಾಡಲಾಗುವುದು” ಎಂದು ಹೇಳಿದರು.