ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಸಲಾಗುತ್ತಿದೆ. ಪ್ರತಿಭಟನೆ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಹಾಗೂ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸೆ.26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆಯಿಂದಲೇ ಪೊಲೀಸರು ಭದ್ರತಾ ಕೆಲಸದಲ್ಲಿ ತೊಡಗಿದ್ದಾರೆ. ನಗರದಲ್ಲಿ ನಾನಾ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ.
ಇನ್ನು ಪ್ರತಿಭಟನಾ ಮೆರವಣಿಗೆಗೆ ಮುನ್ನವೇ, ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
“ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸ್ ಇಲಾಖೆ ತೋರಿಸುತ್ತಿರುವ ದೌರ್ಜನ್ಯ ಖಂಡನೀಯ. ಈ ಕೂಡಲೇ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದರೆ, ಸೆ.29 ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ” ಎಂದು ಮಾಧ್ಯಮಗಳಿಗೆ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | 13 ದೇಶೀಯ ವಿಮಾನ ಹಾರಾಟ ರದ್ದು
ಕುಮಾರಸ್ವಾಮಿ ಟ್ವೀಟ್
ʼʼಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?ʼʼಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು @INCKarnataka ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ,…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 26, 2023