ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಅಧಿಕಾರ ಲೋಕಾಯುಕ್ತ ಬಲೆಗೆ

Date:

Advertisements

ಖಾಸಗಿ ಕಟ್ಟಡವೊಂದಕ್ಕೆ 23 ಕಿಲೋ ವಾಟ್‌ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡಲು ₹3.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಅಧಿಕಾರಿ ಹಾಗೂ ಆತನ ಸಹಚರನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೆಸ್ಕಾಂನ ಜಯನಗರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಧನಂಜಯ ವಿ ಮತ್ತು ಆತನ ಸಹಚರ ಸೈಯದ್ ನಿಜಾಮ್ ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಭರತ್ ಕುಮಾರ್ ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಶಂಕರ್ ಅವರ ನಿವಾಸದಲ್ಲಿ ವಿದ್ಯುತ್ ಕಾಮಗಾರಿಯ ಹೊಣೆ ಹೊತ್ತಿದ್ದರು. ಜಯನಗರದ 8ನೇ ಬ್ಲಾಕ್‌ನಲ್ಲಿರುವ ಶಂಕರ್ ಅವರ ನಿವಾಸಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ನೀಡಲು ಬೆಸ್ಕಾಂ ಜಯನಗರ ಉಪವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

Advertisements

ಇದಕ್ಕೆ ಮಂಜೂರಾತಿ ನೀಡಲು ಬೆಸ್ಕಾಂ ಎಇಇ ಧನಂಜಯ ಅವರು ₹13 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮಾತಿನಂತೆ ಮೊದಲ ಕಂತಿನಲ್ಲಿ ₹3.5 ಲಕ್ಷವನ್ನು ನೀಡುವಂತೆ ಅರ್ಜಿದಾರರಿಗೆ ಎಇಇ ತಿಳಿಸಿದ್ದರು.

ಲೋಕಾಯುಕ್ತ ಬೆಂಗಳೂರು ನಗರ ಘಟಕದ ಎಸ್‌ಪಿ ಕೆ.ವಿ ಅಶೋಕ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಈ ಕಾರ್ಯಾಚರಣೆಯಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ವೆಂಕಟೇಶ್ ಕೆ, ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ

ಲಂಚ ಬೇಡಿಕೆ ಬಗ್ಗೆ ಶಂಕರ್ ಪರವಾಗಿ ಕುಮಾರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕುಮಾರ್‌ ಅವರಿಗೆ ಮೊದಲ ಕಂತಿನ ಹಣವನ್ನು ನೀಡಲು ಸೂಚನೆ ನೀಡಿದ್ದರು. ಬುಧವಾರ ಸಂಜೆ 4 ಗಂಟೆಗೆ ಮುಂಗಡ ಹಣ ನೀಡಲು ಜಯನಗರದ ಬೆಸ್ಕಾಂ ಕಚೇರಿಗೆ ಕುಮಾರ್ ಭೇಟಿ ನೀಡಿದ್ದರು. ಧನಂಜಯ ತನ್ನ ಸಹಚರ ನಿಜಾಮ್‌ನನ್ನು ಹಣ ಪಡೆಯಲು ನಿಯೋಜಿಸಿದ್ದನು. ನಿಜಾಮ್ ಹಣವನ್ನು ಸ್ವೀಕರಿಸಿದಾಗ ಲೋಕಾಯುಕ್ತ ಪೊಲೀಸರು ಧನಂಜಯ ಹಾಗೂ ಆತನ ಸಹಚರನನ್ನು ರೆಡ್‌ ಹ್ಯಾಂಡ್‌ ಆಗಿ ಸೆರೆಹಿಡಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X