- ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ
- ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ ಭಿತ್ತಿಪತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದ ದಿನ ಮೇ. 10ರಂದು ತಪ್ಪದೇ ಮತದಾನ ಮಾಡಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.
ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ(ಕಾಸಿಯಾ)ದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಬೆಂಗಳೂರು ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲ ವಲಯಗಳಲ್ಲಿರುವ ಐಟಿ-ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳ ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ” ಎಂದರು.
“ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸುಮಾರು 5.6 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಮತದಾನದ ದಿನ ಎಲ್ಲರಿಗೂ ವೇತನ ಸಹಿತ ರಜೆ ನೀಡಲಾಗುವುದು. ತಪ್ಪದೇ ಮತದಾನ ಮಾಡಲು ಉದ್ಯೋಗಿಗಳಿಗೆ ತಿಳಿಸಲಾಗುವುದು” ಎಂದು ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹50.70 ಕೋಟಿ ವೆಚ್ಚದಲ್ಲಿ ಆರು ಜಂಕ್ಷನ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿದ ಸರ್ಕಾರ
ದಕ್ಷಿಣ ವಲಯ ಆಯುಕ್ತ ಜಯರಾಮ ರಾಯಪುರ, ಕಾಸಿಯಾ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.