- ಪರೀಕ್ಷೆಗೆ ಹಾಜರಾಗಿದ್ದ 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು
- ಕೆಲವೇ ದಿನಗಳಲ್ಲಿ ಅಧಿಕೃತ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ
2023ರ ಯುಜಿಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂ.12 ಅಥವಾ 14 ರಂದು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧಾರ ಮಾಡಿರುವುದಾಗಿ ಕೆಇಎ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.
ಫಲಿತಾಂಶವನ್ನು ಪ್ರಕಟಿಸಲು ಕೆಇಎ ಅಧಿಕಾರಿಗಳು ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಒಟ್ಟು 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು ಅಂದರೆ, ಶೇ. 93ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.
ಮೇ 21, 22 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಕೀ ಉತ್ತರಗಳನ್ನು ಪರೀಕ್ಷಿಸಿ ತಮಗೆ ಫಲಿತಾಂಶ ಎಷ್ಟು ಲಭಿಸಿರಬಹುದು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ದೊರೆಯಲಿದೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾದ ದಿನ ಕೆಇಎ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ.
ಯುಜಿಸಿಇಟಿ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಈ ಪರೀಕ್ಷೆಯನ್ನು ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.
ಈ ಸುದ್ದಿ ಓದಿದ್ದೀರಾ? ಅಭಿ-ಅವಿ ಮದುವೆ | ನೂತನ ವಧು-ವರರಿಗೆ ಆಶೀರ್ವದಿಸಿದ ಗಣ್ಯರು
ಯುಜಿಸಿಇಟಿ-2023ರ ಫಲಿತಾಂಶವನ್ನು ಆನ್‌ಲೈನ್ ಮೂಲಕ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಕೋರ್ಸ್‌ಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಶ್ರೇಣಿಗಳನ್ನು ನಿಗದಿಪಡಿಸಲಾಗುತ್ತದೆ.