ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

Advertisements
  • ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ
  • ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

Advertisements

ಕಲಬುರಗಿಯಲ್ಲಿ 41.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಾತಾವರಣದ ವ್ಯತ್ಯಾಸದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಳ

ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ, ರಾಜ್ಯದಲ್ಲಿ ಮೋಚಾ ಚಂಡಮಾರುತ ಬೀಸುತ್ತಿದ್ದು, ರಾಜ್ಯಾದ್ಯಂತ ಮಳೆಯಾಗುತ್ತಿದೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X