ಸಚಿವ ಡಿ.ಸುಧಾಕರ್‌ ವಜಾಗೆ ಮುಖ್ಯಮಂತ್ರಿ ಚಂದ್ರು ಆಗ್ರಹ

Date:

Advertisements

ಸಚಿವ ಡಿ.ಸುಧಾಕರ್‌ ಅವರ ಗೂಂಡಾವರ್ತನೆ ಅಕ್ಷಮ್ಯ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್‌ ಅವರು ತಮ್ಮ ವಿರುದ್ಧ ಭೂಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆಯ ದೂರು ದಾಖಲಿಸಿದವರಿಗೆ ಬೆದರಿಕೆ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಮಾಧ್ಯಮಕ್ಕೆ ಬುಧವಾರ ಪ್ರತಿಕ್ರಿಯೆ ನೀಡಿದರು.

“ಸಚಿವರೊಬ್ಬರು ಭೂಗತ ಪಾತಕಿಗಳ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಯಲಹಂಕ ನನಗೆ ಹೊಸದಲ್ಲ. ಕರ್ನಾಟಕ, ಆಂಧ್ರಪ್ರದೇಶದಲ್ಲಿ ಮಚ್ಚು, ಕೊಡ್ಲಿ ಇಟ್ಟುಕೊಂಡು ಓಡಾಟ ನಡೆಸಿದ್ದೇವೆ ಎಂದಿದ್ದಾರೆ. ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡಿದ್ದಕ್ಕೆ ಸಂಬಂಧಿಸಿ ತಕ್ಷಣ ಡಿ. ಸುಧಾಕರ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

Advertisements

“ಸಿಎಂ ಸಿದ್ದರಾಮಯ್ಯ ಅವರು ದಲಿತ ಪರ ಸರ್ಕಾರ ಎಂದು ಹೇಳುತ್ತಲೇ ಬಂದಿದ್ದಾರೆ. ಈಗ ತಮ್ಮ ಸಂಪುಟದ ಸದಸ್ಯರೇ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ. ತಕ್ಷಣ ಅವರನ್ನು ಸಂಪುಟದಿಂದ ವಜಾಗೊಳಿಸುವ ಮೂಲಕ ತಮ್ಮ ‘ನುಡಿದಂತೆ ನಡೆಯುವ ಸಿದ್ದರಾಮಯ್ಯ’ ಎಂಬ ಮಾತನ್ನು ಉಳಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸರಣಿ ಅಪಘಾತದಲ್ಲಿ ದಂಪತಿ ಸಾವು; ಮಗುವಿನ ಸ್ಥಿತಿ ಗಂಭೀರ

“ವೈರಲ್‌ ಆಗಿರುವ ವಿಡಿಯೊ 10 ವರ್ಷಗಳ ಹಿಂದಿನ ಪ್ರಕರಣವೆಂದು ಆರೋಪಿ ಡಿ.ಸುಧಾಕರ್‌ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸುಧಾಕರ್‌ ಅವರು ಖರೀದಿಸಿದ್ದ ಖಾಸಗಿ ಜಮೀನಿಗೆ ಬೇರೆಯವರು ನಿರ್ಮಿಸಿದ್ದ ಕಾಂಪೌಂಡ್‌ ತೆರವುಗೊಳಿಸಿ ಜಮೀನು ಸ್ವಾಧೀನಕ್ಕೆ ಪಡೆಯಲು ಮುಂದಾದ ಸಂದರ್ಭ ನಡೆದಿರುವ ಪ್ರಕರಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದಾರೆ. ಇಬ್ಬರ ಹೇಳಿಕೆ ಗೊಂದಲವಾಗಿದೆ. ತನಿಖೆಯ ವಿವರ ಸಿಗುವ ಮೊದಲೇ ಡಿ.ಕೆ.ಶಿವಕುಮಾರ್‌ ಅವರು ಆರೋಪಿಯ ರಕ್ಷಣೆಗೆ ನಿಂತಿರುವುದು ಪ್ರಶ್ನಾರ್ಹ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X