ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯಿಂದ ತುಮಕೂರಿಗೆ ಸೋಮವಾರ ಬೆಳಗ್ಗೆ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಏಳು ಜನ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಬೆಳಗಾವಿಯಿಂದ ತುಮಕೂರಿಗೆ ತೆರಳುವ ಸಂದರ್ಭದಲ್ಲಿ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48 ಮೂಲಕ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವಾಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ತುಮಕೂರು ನಗರದ ಶಂಶುದ್ದೀನ್ (40), ಮಲ್ಲಿಕಾ (37), ಕಲೀಲ್ (42), ತಬೀಜ್ (13) ಎಂದು ಗುರುತಿಸಲಾಗಿದೆ. ನರ್ಗೀಸ್, ರೆಹಾನ್ ಹಾಗೂ ರೆಹಮಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ; ಎಫ್‌ಐಆರ್ ದಾಖಲು
ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಏಳು ಜನರ ಪೈಕಿ ನಾಲ್ಕು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಸ್ಥಳದಲ್ಲಿ ಮೃತಪಟ್ಟ ನಾಲ್ವರ ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.