ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆ ಸಾಧ್ಯತೆ

Date:

Advertisements

ರಾಜ್ಯದಲ್ಲಿ ವಾಡಿಕೆಯಂತೆ ಜುಲೈನಲ್ಲಿ ಮುಂಗಾರು ಆಗಮನವಾಗಿಲ್ಲ. ಆಗಸ್ಟ್‌ನಿಂದಲೂ ಮಳೆಯ ಅಭಾವ ಹೆಚ್ಚಾಗಿದ್ದು, ರಾಜ್ಯಾದ್ಯಂತ ಬಿಸಿಲ ಧಗೆ ಅಧಿಕವಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

Advertisements

ಮಳೆಗಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ಉಷ್ಣಾಂಶ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಫ್ಯಾನ್ಸಿ ನಂಬರ್‌ ಹರಾಜಿಗೆ ಆಗಸ್ಟ್‌ 31 ರಂದು ಅರ್ಜಿ ಆಹ್ವಾನಿಸಿದ ಸಾರಿಗೆ ಇಲಾಖೆ

ಆಗಸ್ಟ್‌ನಲ್ಲಿ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆಯ ಕೊರತೆ ಎದುರಾದ ಕಾರಣ ರಾಜ್ಯದ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X