ದೇವನಹಳ್ಳಿ | ಜೈಲು ನಿರ್ಮಾಣ, 626 ಮರಗಳಿಗೆ ಕೊಡಲಿ ಹಾಕಲು ಅರಣ್ಯ ಇಲಾಖೆ ಸಜ್ಜು

Date:

ಕರ್ನಾಟಕ ರಾಜ್ಯ ಪೋಲಿಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಸಲ್ಲಿಸಿರುವ ನೂತನ ಕಾರಾಗೃಹ ನಿರ್ಮಾಣ ಕಾಮಗಾರಿಗಾಗಿ ವಿವಿಧ ಜಾತಿಯ 626 ಮರಗಳನ್ನು ಸಂಪೂರ್ಣವಾಗಿ ಕತ್ತರಿಸಲು ಬೆಂಗಳೂರು ಗ್ರಾಮಾಂತರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮುಂದಾಗಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವ್ಯಾಪ್ತಿಯ ಸರ್ವೇ ನಂ. 100 ರ ಜಮೀನಿನಲ್ಲಿ 600 ಬಂದಿಗಳ ಸಾಮರ್ಥ್ಯದ ನೂತನ ಕೇಂದ್ರ ಕಾರಾಗೃಹದ ವಸತಿಯೇತರ ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಅರಣ್ಯ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಪ್ರಸ್ತಾಪಿತ ಪ್ರಸ್ತಾವಣೆಯಲ್ಲಿ ಸರ್ವೇ ನಂ. 100 ರ ಜಮೀನಿನಲ್ಲಿ ಕಾರಾಗೃಹ ನಿರ್ಮಣದ ಕಾಮಗಾರಿಗೆ ಅಡ್ಡಬರುತ್ತಿರುವ ವಿವಿಧ ಜಾತಿಯ 626 ಮರಗಳನ್ನು ಬುಡಸಮೇತ ನಾಶಗೊಳಿಸುವಂತೆ ದೇವನಹಳ್ಳಿಯ ಬಯಲು ಕಾರಾಗೃಹ ಅಧೀಕ್ಷಕರು ಅರಣ್ಯ ಇಲಾಖೆಯನ್ನು ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ

ಈಗ ಅರಣ್ಯ ಇಲಾಖೆ 626 ಮರಗಳಿಗೆ ಕೊಡಲಿ ಏಟು ಹಾಕಲು ಸಜ್ಜಾಗಿ ನಿಂತಿದೆ. ಪ್ರಸ್ತಾಪಿತ ಸರ್ವೇ ನಂಬರ್‌ನಲ್ಲಿ ಮರಗಳನ್ನು ತೆರವುಗೊಳಿಸುವ ಸಂಬಂಧ ಸಾರ್ವಜನಿಕರ ಆಕ್ಷೇಪಣೆ / ಸಲಹೆಗಳಿದ್ದಲ್ಲಿ ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯಿದೆ 1976 ಸೆಕ್ಷನ್ 8(3)(vii) ಪ್ರಕಾರ ಸಲಹೆ ಸೂಚನೆ ನೀಡಲು ಬೆಂಗಳೂರು ಗ್ರಾಮಾಂತರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಇಂದು (ಜೂ. 9) ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಪ್ರಕಟಣೆ ಹೊರಡಿಸಿದ ದಿನಾಂಕದಿಂದ 10 ದಿನಗಳೊಳಗಾಗಿ ಸೂಚನೆ, ಆಕ್ಷೇಪಣೆಗಳು ಪ್ರಸ್ತಾವಿತ ಯೋಜನೆಗೆ ಮಾತ್ರ ಸಲ್ಲಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಸಸಿಗಳು ಪೂರ್ಣ ಪಕ್ವತೆಯನ್ನು ತಲುಪಿ ಮರವಾಗಲು 10-20 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತವೆ. ಅರಣ್ಯವನ್ನು ರಕ್ಷಿಸಬೇಕಾದ ಇಲಾಖೆಯೇ ಬರೊಬ್ಬರಿ 626 ಮರಗಳ ಮಾರಣಹೋಮಕ್ಕೆ ಮುಂದಾಗಿರವುದು ಇಲಾಖೆಗೆ ಒಪ್ಪುವ ನಡೆಯಲ್ಲ.

WhatsApp Image 2025 06 09 at 12.43.37 PM 1 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂ.ಗ್ರಾ | ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಎ ಬಿ ಬಸವರಾಜು

ವಾಯುಮಾಲಿನ್ಯ ತಡೆಗಟ್ಟುವ ಸಲುವಾಗಿ ದೀಪಾವಳಿ ಸಂದರ್ಭದಲ್ಲಿ ಪರಿಸರಸ್ನೇಹಿ ಹಸಿರು ಪಟಾಕಿ ಮಾರಾಟ...

ದೇವನಹಳ್ಳಿ | ಪೋಕ್ಸೋ ಪ್ರಕರಣದ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ; ಪಿಎಸ್‌ಐ ಜಗದೇವಿಗೆ ಜಾಮೀನು ನಿರಾಕರಿಸಿದ ಕೋರ್ಟ್‌

ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು...

ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ

ದೇವನಹಳ್ಳಿ:ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ...