ದೊಡ್ಡಬಳ್ಳಾಪುರ | ಒಂದೇ ಕಾಮಗಾರಿಗೆ ಎರಡು ಬಾರಿ ಗುದ್ದಲಿಪೂಜೆ; ಸಚಿವ ಮುನಿಯಪ್ಪ ವಿರುದ್ಧ ಶಾಸಕ ಧೀರಜ್‌ ಗರಂ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಒಂದೇ ಕಾಮಗಾರಿಗೆ ಎರಡನೇ ಬಾರಿ ಗುದ್ದಲಿ ಪೂಜೆ ನೆರವೇರಿಸಿದ ಹಿನ್ನೆಲೆ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಧೀರಜ್ ಸಚಿವ ಕೆ ಎಚ್‌ ಮುನಿಯಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ದೀರಜ್, “ಒಂದೇ ಕಾಮಗಾರಿಗೆ ಎರಡೆರಡು ಬಾರಿ ಗುದ್ದಲಿ ಪೂಜೆ ಮಾಡುವುದರಿಂದ ಸರ್ಕಾರದ ಕಾರ್ಯವೈಖರಿ ಸ್ಪಷ್ಟವಾಗುತ್ತದೆ. ಇದು ಜನರನ್ನು ಮರುಳು ಮಾಡುವ ನಾಟಕ” ಎಂದು ಕಿಡಿಕಾರಿದರು. “ಈ ಹಿಂದೆ ಎರಡು ವರ್ಷದ ಸಾಧನಾ ಸಮಾವೇಶ ಎಂಬ ಹೆಸರಿನಲ್ಲಿ ಮುಖ್ಯಮಂತ್ರಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಆದರೆ ಆ ಎರಡು ವರ್ಷಗಳಲ್ಲಿ ಯಾವ ಸಾಧನೆ ಮಾಡಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಜನರಿಗೆ ಹೇಳಬೇಕು ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಎರಡು ವರ್ಷಗಳಲ್ಲಿ ದೊಡ್ಡಬಳ್ಳಾಪುರಕ್ಕೆ ಏನು ಕೊಟ್ಟಿದ್ದೀರಿ? ಯಾವ ಅಭಿವೃದ್ಧಿ ಕೆಲಸಗಳು ನಡೆದಿವೆ?” ಎಂದು ಪ್ರಶ್ನಿಸಿದರು.

ಇದನ್ನು ಓದಿ: ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ಆದರೆ ಇದೇ ಪ್ರಶ್ನೆಯನ್ನು ಸಚಿವರ ಮುಂದೆ ಕೇಳುವ ಸಂದರ್ಭ ಬಂದಾಗ, ಶಾಸಕ ಧೀರಜ್ ಅವರ ನಿಲುವಿನಲ್ಲಿ ಬದಲಾವಣೆ ಕಂಡುಬಂದಿತು. ಸಚಿವರ ಮುಂದೆ ಪ್ರಶ್ನೆ ಕೇಳುತ್ತಿದ್ದಂತೆ ‘ಸಾಫ್ಟ್ ಕಾರ್ನರ್’ ತೋರಿದಂತೆ ಮಾತನಾಡಿದ ಅವರು, ತಾವು ಹೇಳಿದ ಮಾತುಗಳನ್ನು ತಿರುಚಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು. “ನಾನು ಜವಳಿ ಇಲಾಖೆಗೆ ಅನುದಾನ ಬಂದಿಲ್ಲ ಎಂದಷ್ಟೇ ಹೇಳಿದ್ದೇನೆ. ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ” ಎಂದು ಹೇಳಿದರು.

ಒಂದೇ ವೇದಿಕೆಯಲ್ಲಿ ಪರಸ್ಪರ ವಿರೋಧಿ ಹೇಳಿಕೆಗಳನ್ನು ನೀಡಿದ ಶಾಸಕ ದೀರಜ್ ಅವರ ನಡೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ | ಅಪ್ರಾಪ್ತೆಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ಸೇರಿ ಮೂವರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಗೆ ಬಲವಂತದಿಂದ ಮದ್ಯ ಕುಡಿಸಿ...

ದೊಡ್ಡಬಳ್ಳಾಪುರ |ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ

ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್...

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿದುಕೊಳ್ಳದಂತೆ ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

"ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್‌...