ದೊಡ್ಡಬಳ್ಳಾಪುರ |ಧರ್ಮಸ್ಥಳದ ಶ್ರೀಮುಡಿ ಭವನದದಲ್ಲಿ ದಲಿತ ಮುಖಂಡ ಗುರುರಾಜಪ್ಪ ರವರ ಶವ ಪತ್ತೆ !

Date:

ದಲಿತರ ಮುಖಂಡ, ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ಸಿ.ಗುರುರಾಜಪ್ಪ ಅವರು ಅಕಾಲಿಕ ಮರಣ ಹೊಂದಿದ್ದಾರೆ.

- Advertisement -

ಧರ್ಮಸ್ಥಳದ ಶ್ರೀಮುಡಿ ಭವನದ ವರಾಂಡದಲ್ಲಿ 55 ವರ್ಷದ ಅಪರಿಚಿತ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರ ಕಛೇರಿಪಾಳ್ಯದ ಗುರುರಾಜಪ್ಪ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ದಲಿತ, ಕನ್ನಡ ಮತ್ತು ಪ್ರಗತಿಪರ ಹೋರಾಟಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಗುರುರಾಜಪ್ಪ ಅವರ ದೇಹ ಮೃತಪಟ್ಟ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಅನಾರೋಗ್ಯ ಅಥವಾ ಇತರ ಕಾರಣದಿಂದ ಮಲಗಿದ್ದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

Advertisements

ದೊಡ್ಡಬಳ್ಳಾಪುರದ ಕಛೇರಿಪಾಳ್ಯದ ನಿವಾಸಿಯಾಗಿರುವ ಗುರುರಾಜಪ್ಪ ಅವರು ಗುರುವಾರ ತಮ್ಮ ಬೈಕ್ ತೆಗೆದುಕೊಂಡು ಹೋದವರು, ಪೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದರು, ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿಲು ಕುಟುಂಬಸ್ಥರು ಹೋದಾಗ, ಧರ್ಮಸ್ಥಳಧಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಮಾಹಿತಿ ಬಂದಿದೆ, ಮೃತ ದೇಹದ ಭಾವಚಿತ್ರ ಹೋಲಿಕೆಯಾದ ಕಾರಣ ಮೃತರು ಗುರುರಾಜಪ್ಪ ಎಂದು ತಿಳಿದು ಬಂದಿರುವುದಾಗಿ ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ, ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿದು ಬರಲಿದೆ.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ರಮೇಶ್, ಗೌರವ ಅಧ್ಯಕ್ಷ ತಿಮ್ಮರಾಯಪ್ಪ, ನಿವೃತ್ತ ಪ್ರಾಧ್ಯಾಪಕ ಪ್ರೋ.ಚಂದ್ರಪ್ಪ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಮುಖಂಡರಾದ ರಾಜುಸಣ್ಣಕ್ಕಿ, ಛಲವಾದಿ ಸುರೇಶ್, ತಳಗವಾರ ಪುನೀತ್, ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಗುರುರಾಜಪ್ಪ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...