ದೊಡ್ಡಬಳ್ಳಾಪುರ | ನೈತಿಕ ಪೊಲೀಸ್‌ಗಿರಿ: ಉದ್ಯಮಿ ಮೇಲೆ ಹಲ್ಲೆ ನಡೆಸಿದ್ದ 12 ಜನರ ಬಂಧನ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದರಲ್ಲಿ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ.

ಜುಲೈ 26ರಂದು ಸಂಜೆ ಸುಮಾರು 6.30ಕ್ಕೆ ಘಟನೆ ನಡೆದಿದೆ. ಬ್ಯಾಟರಿ ತಯಾರಿಕಾ ಘಟಕದ ಮಾಲೀಕ ಅರವಿಂದ್ ಭಾರದ್ವಾಜ್ ಮತ್ತು ಅವರ ಮಹಿಳಾ ಸ್ನೇಹಿತೆ, ಕೆ.ಜಿ. ಕುಂಟನಹಳ್ಳಿ ಕೆರೆಯ ಬಳಿ ಕಾರಿನಲ್ಲಿ ಕುಳಿತಿದ್ದಾಗ, ಕೆಲವು ಯುವಕರು ಅವರ ಇರುವಿಕೆಯನ್ನು ಪ್ರಶ್ನಿಸಿ ಆಕ್ಷೇಪಿಸಿದ್ದರು. ಇಬ್ಬರೂ ಅಲ್ಲಿಂದ ಹೊರಟು ಬ್ಯಾಟರಿ ಫ್ಯಾಕ್ಟರಿಯತ್ತ ಹೊರಟಾಗ, ಹಿಂಬಾಲಿಸಿ ಬಂದ ಸುಮಾರು 30-40 ಜನರ ಗುಂಪು ನೇರವಾಗಿ ಬ್ಯಾಟರಿ ತಯಾರಿಕಾ ಘಟಕದ ಒಳಗೆ ನುಗ್ಗಿದೆ.

- Advertisement -

ಗುಂಪಿನಲ್ಲಿ ಬಂದವರು ಕಾರಿನ ಕಿಟಕಿಗಳನ್ನು ಒಡೆದು ಫ್ಯಾಕ್ಟರಿ ಆವರಣಕ್ಕೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಕಂಪನಿ ಮಾಲೀಕ ಅರವಿಂದ್ ಭಾರದ್ವಾಜ್‌ಗೆ ದೊಣ್ಣೆ, ಗದೆ ಮತ್ತು ಚಾಕುವಿನಿಂದ ಹಲ್ಲೆ ಮಾಡಿದ್ದು, ಅವರ ತಲೆ, ಬಲಗೈ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಜೊತೆಗಿದ್ದ ಬಿಸಿನೆಸ್ ಪಾರ್ಟ್‌ನರ್ ಅನುಪಮ್ ಕುಮಾರ್ ಕೂಡ ಗುಂಪಿನಿಂದ ಹಲ್ಲೆಗೊಳಗಾಗಿದ್ದಾರೆ. ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉದ್ಯೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದೂರಿನಲ್ಲಿ ಉಲ್ಲೇಖಿಸಿರುವಂತೆ, ಭಾರದ್ವಾಜ್ ಜೊತೆಗಿದ್ದ ಮಹಿಳೆಯನ್ನು ಅವಾಚ್ಯ ಮಾತುಗಳಿಂದ ನಿಂದಿಸಿ ಅವಮಾನಿಸಿದ್ದಲ್ಲದೆ, ಸಿಸಿಟಿವಿ ಕ್ಯಾಮೆರಾಗಳು ಮತ್ತು ಮಾನಿಟರ್‌ಗಳನ್ನು ಹಾಳುಗೆಡಹಿ, ಕಂಪನಿಯಲ್ಲಿದ್ದ ಉದ್ಯೋಗಿಗಳಿಗೆ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...