2100 ಎಕರೆ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ; ದೇವನಹಳ್ಳಿ ಮಾದರಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತರು

Date:

ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು ಅಭಿವೃದ್ಧಿ ಹೆಸರಿನಲ್ಲಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಭೂ ಸ್ವಾಧೀನ ಮಾಡಲು ಮುಂದಾಗುತ್ತಿರುತ್ತವೆ. ಹಲವೆಡೆ ಈ ಅನ್ಯಾಯದ ವಿರುದ್ಧ ರೈತರು ಧ್ವನಿ ಎತ್ತುತ್ತಾ ವಿರೋಧ ಮಾಡಿಕೊಂಡು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುತ್ತಾರೆ. ಇತ್ತೀಚೆಗೆ ಭೂ ಸ್ವಾಧೀನದ ವಿರುದ್ಧ ನಡೆದ ದೇವನಹಳ್ಳಿಯ ಚನ್ನರಾಯಪಟ್ಟಣ ಹೋರಾಟದ ಮಾದರಿಯಲ್ಲೇ ಇದೀಗ ದೊಡ್ಡಬಳ್ಳಾಪುರ ರೈತರು ಭೂ ಸ್ವಾಧೀನದ ವಿರುದ್ಧ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಸುಮಾರು 2100 ಎಕರೆ ಕೃಷಿ ಭೂಮಿಯ ಸ್ವಾಧೀನ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

- Advertisement -

ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಸುತ್ತಮುತ್ತಲಿನ ಸುಮಾರು 2,100 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನ ಮಾಡಲು ಮುಂದಾಗಿರುವ KIADB ಕ್ರಮದ ವಿರುದ್ಧ ಅನ್ನದಾತರು ರೊಚ್ಚಿಗೆದ್ದಿದ್ದಾರೆ. “ನಮ್ಮ ಪ್ರಾಣ ಹೋದರೂ ಸರಿ, ವರ್ಷಕ್ಕೆ ಮೂರು ಬೆಳೆ ಬೆಳೆಯುವ ಬಂಗಾರದಂತಹ ಭೂಮಿಯನ್ನು ಕಾರ್ಖಾನೆಗಳಿಗೆ ಬಿಟ್ಟುಕೊಡುವುದಿಲ್ಲ” ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಈ ಭೂಸ್ವಾಧೀನ ಪ್ರಕ್ರಿಯೆಯು ನೂರಾರು ರೈತ ಕುಟುಂಬಗಳನ್ನು ಬೀದಿಪಾಲು ಮಾಡಲಿದೆ ಎಂಬ ಆತಂಕ ಸೃಷ್ಟಿಯಾಗಿದ್ದು, ಇಡೀ ಭಾಗದ ರೈತರು ಸರ್ಕಾರದ ನಿರ್ಧಾರದ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
WhatsApp Image 2026 04 06 at 7.21.59 PM

ಈ ಹೋರಾಟದ ಭಾಗವಾಗಿ ಕಳೆದ ವಾರ ರೈತ ಸಂಘಟನೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರ ನೇತೃತ್ವದಲ್ಲಿ ಚಿಕ್ಕಬೆಳವಂಗಲದಿಂದ ದೊಡ್ಡಬಳ್ಳಾಪುರ ತಾಲೂಕು ಕಚೇರಿಯವರೆಗೆ ಬೃಹತ್ ಟ್ರಾಕ್ಟರ್ ರ್ಯಾಲಿ ನಡೆಸಲಾಯಿತು. ನೂರಾರು ಟ್ರಾಕ್ಟರ್‌ಗಳೊಂದಿಗೆ ರಸ್ತೆಗಿಳಿದ ಸಾವಿರಾರು ರೈತರು ಸರ್ಕಾರದ ಏಕಪಕ್ಷೀಯ ಧೋರಣೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಒಪ್ಪಿಗೆಯಿಲ್ಲದೆ ಫಲವತ್ತಾದ ಜಮೀನನ್ನು ಕಬಳಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಈ ‘ಟ್ರಾಕ್ಟರ್ ಸಮರ’ವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕೃಷಿ ಭೂಮಿ ಉಳಿಸಿಕೊಳ್ಳುವವರೆಗೂ ಹೋರಾಟ ನಿಲ್ಲದು ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಈ ಭಾಗದಲ್ಲಿ ‘ಅಭಿವೃದ್ಧಿ ಭೂಮಿ ಇಲ್ಲ, ನೀರಾವರಿ ಇಲ್ಲ’ ಎಂದು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ, ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೊರಟಿರುವ ಅಧಿಕಾರಿಗಳ ನಡೆಗೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈಗಾಗಲೇ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿರುವ ನೂರಾರು ಎಕರೆ ಜಾಗ ಖಾಲಿಯಾಗಿ ಬಿದ್ದಿದ್ದರೂ, ಮತ್ತೆ ಅನ್ನ ನೀಡುವ ಹಸಿರು ಭೂಮಿಗೆ ಕೈ ಹಾಕಿರುವುದು ಸರಿಯಲ್ಲ. ಈ ಭಾಗದ 8 ಸಾವಿರಕ್ಕೂ ಹೆಚ್ಚು ಕುಟುಂಬಗಳು ಬದುಕು ಕಟ್ಟಿಕೊಂಡಿರುವ ಕೃಷಿ ಭೂಮಿಯನ್ನು ನಾವು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ” ಎಂದು ಹೋರಾಟನಿರತ ರೈತರು ಖಡಕ್ ಆಗಿ ತಿಳಿಸಿದ್ದಾರೆ.

ಕಳೆದ 20 ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ರೈತರು, ಶಾಸಕರು ಹಾಗೂ ತಾಲೂಕಿನ ಮುಖಂಡರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ವಾರ ನಡೆದ ಬೃಹತ್ ಟ್ರಾಕ್ಟರ್ ರ್ಯಾಲಿಯು ಕೇವಲ ಆರಂಭವಷ್ಟೇ ಎಂದು ಎಚ್ಚರಿಸಿರುವ ರೈತರು, **’ಚನ್ನರಾಯಪಟ್ಟಣ ಹೋರಾಟ’**ವನ್ನು ಮಾದರಿಯಾಗಿಟ್ಟುಕೊಂಡು ಭೂಸ್ವಾಧೀನ ಪ್ರಕ್ರಿಯೆ ರದ್ದಾಗುವವರೆಗೂ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸುಳ್ಳು ವರದಿ ನೀಡಿರುವ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿರುವ ಅನ್ನದಾತರು, ತಮ್ಮ ಅಸ್ತಿತ್ವಕ್ಕಾಗಿ ತೀವ್ರ ಸ್ವರೂಪದ ಹೋರಾಟಕ್ಕೆ ಸಜ್ಜಾಗಿದ್ದಾರೆ.

WhatsApp Image 2026 04 06 at 7.21.58 PM

ಭೂ ಸ್ವಾಧೀನ ಮಾಡಲು ಮುಂದಾಗಿರುವ 5 ಗ್ರಾಮಗಳು ಹೆದ್ದಾರಿಯ ಪಕ್ಕದಲ್ಲಿವೆ. ಭೂ ಸ್ವಾಧೀನ ಕೈ ಬಿಡುವವರೆಗೂ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಲು ಮುಂದಾಗುತ್ತೇವೆ. ಈ ಹೋರಾಟಕ್ಕೆ ಕರ್ನಾಟಕ ರೈತ ಸಂಘ, ಪ್ರಾಂತ ರೈತ ಸಂಘ, ಕೆಆರ್‌ಎಸ್, ಕನ್ನಡ ಪರ ಸಂಘಟನೆಗಳು ಹಾಗೂ ದೊಡ್ಡಬಳ್ಳಾಪುರದಲ್ಲಿ ನೂರಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ದೊಡ್ಡಬಳ್ಳಾಪುರದ ಹಾಲಿ ಮತ್ತು ಮಾಜಿ ಶಾಸಕರು ಸಹ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಅದರ ಜೊತೆಗೆ ಪಕ್ಷಾತೀತವಾಗಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸಹ ಸಾಥ್ ನೀಡಿದ್ದಾರೆ. ಮುಖ್ಯವಾಗಿ ಕಾನೂನು ತಜ್ಞರಾದ ಹನುಮಂತರಾಯ್ ರವರು ಸಹ ಬೆಂಬಲ ನೀಡಿದ್ದಾರೆ ಹಾಗೂ ಅಧಿಕಾರ ವಿರುದ್ಧ ಮೊಕದ್ದಮೆ ದಾಖಲು ಮಾಡುತ್ತೇವೆ ಎಂದು ಪ್ರತಿಭಟನಾ ನಿರತ ರೈತರು ಎಚ್ಚರಿಸಿದ್ದಾರೆ.

ಭೂ ಸ್ವಾಧೀನಕ್ಕೆ ಒಳಪಡುತ್ತಿರುವ ಕೃಷಿ ಭೂಮಿಯನ್ನು ನಂಬಿ ನೂರಾರು ಕುಟುಂಬಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಖಾಲಿ ಜಮೀನು ಎಂದು ತಪ್ಪು ವರದಿ ನೀಡಿ ಕಣ್ಣಿಲ್ಲದ ಕುರುಡರಂತೆ ವರ್ತನೆ ಮಾಡಿರುವುದು ಸರಿಯಲ್ಲ. ಅನ್ನ ತಿನ್ನುವ ಯಾವ ಅಧಿಕಾರಿಯೂ ಈ ರೀತಿ ಸುಳ್ಳು ಮಾಹಿತಿ ನೀಡುವುದಿಲ್ಲ ಎಂದು ಅಧಿಕಾರಿಗಳ ವಿರುದ್ಧ ರೈತ ಮಹಿಳೆ ಜಯಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2026 04 06 at 7.22.00 PM

ಕರ್ನಾಟಕ ರೈತ ಪ್ರಾಂತ ಸಂಘದ ಉಪಾಧ್ಯಕ್ಷೆ ಪ್ರಭಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, “ಭೂಸ್ವಾಧೀನ ವಿರೋಧಿ ಹೋರಾಟವು ಮಣ್ಣಿನ ಮಕ್ಕಳ ಹೋರಾಟ. 2100 ಎಕರೆ ಕೃಷಿ ಭೂಮಿಯನ್ನು ನಾವು ಹೋರಾಟದ ಮೂಲಕ ಉಳಿಸಿಕೊಳ್ಳಬೇಕು. ಕೆಐಎಡಿಬಿ ಅಧಿಕಾರಿಗಳು ಇದು ಖಾಲಿ ಭೂಮಿ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಭೂಮಿಯನ್ನು ಕಾರ್ಖಾನೆಗಳ ಪಾಲಿಗೆ ಬಿಟ್ಟುಕೊಡುವುದಿಲ್ಲ” ಎಂದಿದ್ದಾರೆ.

ದೊಡ್ಡಬಳ್ಳಾಪುರ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ʼನಮ್ಮ ತಾಲೂಕಿನಲ್ಲಿ 2100 ಎಕರೆ ಭೂ ಸ್ವಾಧೀನದ ಅಗತ್ಯವಿಲ್ಲʼ ಎಂದು ಹೇಳುವ ಮೂಲಕ ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ, ನಾರನಹಳ್ಳಿ ಮತ್ತು ಸೊಣ್ಣೇನಹಳ್ಳಿ ಗ್ರಾಮಗಳ ಕೃಷಿ ಭೂಮಿಯ ಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು; ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಅನ್ನದಾತರಿಗೆ ಜಯ ಸಿಗುವವರೆಗೂ ಉಗ್ರವಾಗಿ ಪ್ರತಿಭಟಿಸುವುದಾಗಿ ರೈತರು ಅಂತಿಮ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳ ತಪ್ಪು ಮಾಹಿತಿ ಮತ್ತು ಸರ್ಕಾರದ ಹಠಮಾರಿ ಧೋರಣೆಯ ವಿರುದ್ಧ ಅಸ್ತಿತ್ವಕ್ಕಾಗಿ ನಡೆಯುತ್ತಿರುವ ಈ ಸಮರಕ್ಕೆ ನೂರಕ್ಕೂ ಹೆಚ್ಚು ಸಂಘಟನೆಗಳು ಹಾಗೂ ಪಕ್ಷಾತೀತವಾಗಿ ನಾಯಕರು ಸಾಥ್ ನೀಡಿದ್ದು, ಮುಂಬರುವ ದಿನಗಳಲ್ಲಿ ಈ ಹೋರಾಟ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...