96 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ: ಬಿಎಂಆರ್‌ಸಿಎಲ್

Date:

Advertisements
  • ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13 ಕೊನೆಯ ದಿನಾಂಕ
  • ನಿಗಮದಲ್ಲಿ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್‌ 96 ಹುದ್ದೆ ಖಾಲಿ

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ದಲ್ಲಿ ಖಾಲಿ ಇದ್ದ 96 ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್‌ 7ರವರೆಗೆ ಅವಧಿ ವಿಸ್ತರಿಸಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಸಲು ನಿಗಮ ಮೇ 31ರವರೆಗೆ ಅವಕಾಶ ನೀಡಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದೆ.

ನಿಗಮದಲ್ಲಿ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್‌ಗೆ 96 ಹುದ್ದೆಗಳು ಖಾಲಿ ಇದ್ದು, ಕೆಲಸಕ್ಕಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್‌ ನೀಡಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

Advertisements

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮೇ 16, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ

ಮಾಸಿಕ ವೇತನ ₹35,000-82,660 ಇರಲಿದೆ.

ಪ್ರಮುಖ ದಿನಾಂಕಗಳು:
ಮೇ 16 ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನಾಂಕವಾಗಿದೆ.
ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13 ಕೊನೆಯ ದಿನಾಂಕ

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಕ್ಕಾಗಿ ಅಜ್ಜಿಯ ಕೊಲೆ : ಮೂವರ ಬಂಧನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ BMTC ಕಾಂಪ್ಲೆಕ್ಸ್, K.H ರಸ್ತೆ, ಶಾಂತಿನಗರ ಬೆಂಗಳೂರು – 560027 ಕಳುಹಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X